ನಾಡದೇವತೆ ಹುಲಿಗೆಮ್ಮ ದೇವಿ ದರ್ಶನ ಪಡೆದ ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
ಕೊಪ್ಪಳ ಜಿಲ್ಲೆಯ ಪ್ರವಾಸದಲ್ಲಿದ್ದ
ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಡಿಸೆಂಬರ್ 19 ರಂದು ಕೊಪ್ಪಳ ತಾಲ್ಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.
ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜನಾರ್ಧನ ರೆಡ್ಡಿ ಅವರು ಸಹ ಇದೆ ವೇಳೆ ಸಚಿವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಪುರೋಹಿತರಾದ ಗೋಪಾಲಕೃಷ್ಣ ಜೋಶಿ, ಶ್ರೀನಿವಾಸ ಶರ್ಮಾ ಮತ್ತು
ನಾಗರಾಜ ಭಟ್ ಅವರು
ವಿಶೇಷ ಪೂಜೆ ನೆರವೇರಿಸಿ ಸಚಿವರಿಗೆ ಹಾಗೂ ಶಾಸಕರಿಗೆ ಹೂವು, ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹೆಚ್., ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಮುಖಂಡರಾದ ಬಸವರಾಜ ಹಿಟ್ನಾಳ, ತಹಸೀಲ್ದಾರ ವಿಠ್ಠಲ್ ಚೌಗಲಾ, ದೇವಾಲಯದ ಆಡಳಿತಾಧಿಕಾರಿ ಅರವಿಂದ ಸುತಗುಂಡಿ, ತಾಪಂ ಇಓ ದುಂಡಪ್ಪ ತುರಾದಿ, ಪೊಲೀಸ್ ಅಧಿಕಾರಿಗಳಾದ
ಸಿದ್ದಲಿಂಗಪ್ಪಗೌಡ ಪಾಟೀಲ, ಮಹಾಂತೇಶ ಸಜ್ಜನ, ಹುಲಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ
ನೀಲಮ್ಮ ಗುಂಗಾಡಿ, ಉಪಾಧ್ಯಕ್ಷರಾದ ಸಯ್ಯದ ನ್ಯಾಮತಲಿ, ಸದಸ್ಯರಾದ
ಕಿಶೋರ, ಖಾಜಾವಲಿ ಜವಳಿ, ರತ್ನಕಲಾ ಕೇಶವರಾವ್, ಪಿಡಿಓ
ಗುರುದೇವಮ್ಮ ಸೇರಿದಂತೆ ಇತರರು ಇದ್ದರು.
Comments are closed.