ಹನುಮಮಾಲಾ ಕಾರ್ಯಕ್ರಮ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಡಿಸೆಂಬರ್ 22 ರಂದು ಗಂಗಾವತಿ ನಗರದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಹಾಗೂ ಡಿ.24 ರಂದು ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರ ಪ್ರಕಾರ ಡಿಸೆಂಬರ್ 22 ರ ಬೆಳಿಗ್ಗೆ 08 ಗಂಟೆಯಿAದ ಡಿ.24 ರ ರಾತ್ರಿ 12 ಗಂಟೆಯವರೆಗೆ ಗಂಗಾವತಿ ನಗರ ಠಾಣೆ ಮತ್ತು ಅಂಜನಾದ್ರಿ ಬೆಟ್ಟ ಹಾಗೂ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
Comments are closed.