ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ಅಂತಿಹ ಹಂತದ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಡಿಸೆಂಬರ್ 22ರಂದು ಮತ್ತೊಂದು ಸುತ್ತು ಅಂಜನಾದ್ರಿಗೆ ಭೇಟಿ ನೀಡಿ ಹನುಮಮಾಲಾ ವಿಸರ್ಜನೆಯ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು.
ರಾಜ್ಯ ಹಾಗೂ ದೇಶದ ನಾನಾ ಭಾಗಗಳಿಂದ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಅಂಜನಾದ್ರಿಯ ಬೆಟ್ಟದ ಸುತ್ತಲು, ಹನುಮನಹಳ್ಳಿ, ಆನೆಗೋಂದಿ, ಕಡೆಬಾಗಿಲು ಸೇರಿದಂತೆ ವಿವಿಧೆಡೆ ಗುರುತಿಸಿರುವ ಪಾರ್ಕಿಂಗ್ ಸ್ಥಳಗಳು ಮತ್ತು ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಚನಾ ಫಲಕಗಳನ್ನು ಹಾಕಿರುವುದನ್ನು ನೋಡಿದರು.
ಅಂಜನಾದ್ರಿ ಬೆಟ್ಟದ ಸುತ್ತಲು ವಿವಿಧೆಡೆ ಅಳವಡಿಸಿರುವ ಕುಡಿಯುವ ನೀರಿನ ಪಾಯಿಂಟಗಳು, ತಾತ್ಕಾಲಿಕ ಶೌಚ ಗೃಹಗಳು ಸೇರಿದಂತೆ ಅಂತಿಮ ಹಂತದಲ್ಲಿದ್ದ ನಾನಾ ಮೂಲ ಸೌಕರ್ಯದ ಸಿದ್ಧತೆಯ ಬಗ್ಗೆ ಮಾಹಿತಿ ಪಡೆದರು.
ವೇಧಪಾಠ ಶಾಲೆಯ ಹತ್ತಿರ ಪ್ರಸಾದ ಸಿದ್ಧಪಡಿಸುವ ಸ್ಥಳ ಹಾಗೂ ಅಡುಗೆ ಸಿದ್ಧಪಡಿಸಲು ಬೇಕಾದ ದವಸ ಧಾನ್ಯಗಳು ಮತ್ತು ಇನ್ನೀತರ ಪರಿಕರಗಳ ಸಿದ್ಧತೆಯ ಬಗ್ಗೆ ಸಹ ಜಿಲ್ಲಾಧಿಕಾರಿಗಳು ಮಾಹಿತಿ ಪಡೆದುಕೊಂಡರು.
ಅಂಜನಾದ್ರಿಯ ಬೆಟ್ಟದ ಕೆಳಗಿನ ಸಹಾಯವಾಣಿ ಕೇಂದ್ರದ ಹತ್ತಿರ ಮತ್ತೊಮ್ಮೆ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಸಮಿತಿವಾರು ಪರಿಶೀಲಿಸಿ ಎಲ್ಲ ಸಿದ್ಧತೆಯ ಬಗ್ಗೆ ಖಚಿತಪಡಿಸಿಕೊಂಡು ಬಾಕಿ ಯಾವುದಾದರು ಕೆಲಸ ಉಳಿದಿದ್ದಲ್ಲಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಸೀಲ್ದಾರರಾದ ವಿಶ್ವನಾಥ ಮುರಡಿ, ಶ್ರುತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿದೇವಿ ಸೇರಿದಂತೆ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯ ಅಧಿಕಾರಿಗಳು ಇದ್ದರು.
Comments are closed.