ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆ

Get real time updates directly on you device, subscribe now.

: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜನವರಿ 19 ರಂದು ಆಚರಿಸಲಾಗುವ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಗ್ರೇಡ್-2 ತಹಶೀಲ್ದಾರ ರಜನಿಕಾಂತ ಅವರು ಹೇಳಿದರು.
ಮಂಗಳವಾರದAದು ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ನಿಗದಿಪಡಿಸಿದಂತೆ ಜನವರಿ 15 ರಂದು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲ್ಲೂಕಾ ಕಚೇರಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಜಯಂತಿ ಆಚರಣೆ ಮಾಡಲಾಗುತ್ತದೆ. ಆದರೆ ಸಮಾಜದವರ ಬೇಡಿಕೆ ಅನುಸಾರ ಜಿಲ್ಲಾ ಕೇಂದ್ರದಲ್ಲಿ ಜನವರಿ 19 ರಂದು ಜಯಂತಿ ಕಾರ್ಯಕ್ರಮವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದ ಬಂಧುಗಳು ಅನುಕೂಲ ಮಾಡಿಕೊಡಬೇಕು. ಹಾಗೆಯೇ ಜಯಂತಿ ಆಚರಣೆಗೆ ಸಂಬAಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ಜ.19 ರಂದು ಬೆಳಿಗ್ಗೆ 08.30 ಗಂಟೆಗೆ ನಗರದ ಗವಿಮಠದಿಂದ ಮೆರವಣಿಗೆ ಆರಂಭವಾಗಿ, ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನ ತಲುಪುತ್ತದೆ. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸುತ್ತವೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಒದಗಿಸಬೇಕು. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಶೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬAಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಸುಗಮ ಸಂಗೀತಕ್ಕೆ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಸಮಾಜದ ಬೇಡಿಕೆ ಹಾಗೂ ಅವರ ಸಲಹೆಯಂತೆ ಅವರು ಸೂಚಿಸಿದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವ ಕಾರಣ ಯಾವುದೇ ರೀತಿಯ ಅನನುಕೂಲವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಸಮಾಜದ ಜಿಲ್ಲಾಧ್ಯಕ್ಷರಾದ ನಿಂಗಪ್ಪ ಸುಣಗಾರ, ಜಿಲ್ಲಾ ಉಪಧ್ಯಾಕ್ಷರಾದ ರಾಮಣ್ಣ ಅಳವಂಡಿ, ಕಲ್ಯಾಣ ಕರ್ನಾಟಕ ಮಾಧ್ಯಮ ಪ್ರತಿನಿಧಿ ರಾಮು ಪೂಜಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಭೋವಿ, ಜಿಲ್ಲಾ ಸದಸ್ಯರಾದ ಮಾಸ್ತಿ ಕಟ್ಟಿಮನಿ, ಹನುಮೇಶ್ ಕುಳ್ಳಿಕರ್, ಗಾಳಪ್ಪ ಗಂಗಾವತಿ, ಸುಂಕಪ್ಪ ಮಾಲಗಿತ್ತಿ, ಕೊಪ್ಪಳ ತಾಲ್ಲೂಕು ಅಧ್ಯಕ್ಷರಾದ ಹುಚ್ಚಪ್ಪ ಭೋವಿ, ಉಪಧ್ಯಾಕ್ಷರಾದ ಲಕ್ಷö್ಮಣ ಪೂಜಾರಿ, ಸಮಾಜದ ಮುಖಂಡರಾದ ಹನುಮಂತ ಭೋವಿ, ಬರ್ಮಜ್ಜ ಪೂಜಾರಿ ಸೇರಿದಂತೆ ಸಮಾಜದ ಪ್ರಮುಖರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!