ಡಿಸೆಂಬರ್ 29 ರಂದು ಕೊಪ್ಪಳದಲ್ಲಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ

Get real time updates directly on you device, subscribe now.

ಜಿಲ್ಲಾಡಳಿತದ ವತಿಯಿಂದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು  ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ, ಗಾಲಿ ಜನಾರ್ಧನರೆಡ್ಡಿ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್, ಆಗಮಿಸುವರು. ಕೊಪ್ಪಳ ಸಾಹಿತಿಗಳಾದ ಅಕ್ಬರ್ ಸಿ. ಕಾಲಿಮಿರ್ಚಿ ಅವರು ವಿಶ್ವಮಾನವ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಸುನೀಲ್ ವಂಟಗೋಡಿ, ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: