ಬಾಲ್ಯ ವಿವಾಹ ಪ್ರಕರಣಗಳಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ತಹಶೀಲ್ದಾರ ವಿಠ್ಠಲ್ ಚೌಗಲಾ

Get real time updates directly on you device, subscribe now.

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ರಚಿಸಲಾದ ತಾಲ್ಲೂಕು ಮಟ್ಟದ ಸಮಿತಿಯ ಎಲ್ಲ ಸದಸ್ಯರು, ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ತಿಳಿಸಿದರು.
ಬುಧವಾರದಂದು ಬಾಲ್ಯ ವಿವಾಹಗಳನ್ನು ತಡೆಯುವ ತಾಲ್ಲೂಕು ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮಿತಿ ಸಭೆಗಳಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರತಿನಿಧಿಗಳನ್ನು ಸಭೆಗೆ ನಿಯೋಜಿಸದೆ ಖುದ್ದಾಗಿ ಅಧಿಕಾರಿಗಳೇ ಹಾಜರಿರಬೇಕು. ಇದರಿಂದ ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳು, ಪರಸ್ಪರ ಸಮನ್ವಯ ಸಾಧನೆ ಮುಂತಾದವುಗಳ ಕುರಿತು ಎಲ್ಲರಿಗೂ ಸೂಕ್ತ ಮಾಹಿತಿ ದೊರೆಯುತ್ತದೆ. ಅಧಿಕಾರಿ, ಸಮಿತಿ ಸದಸ್ಯರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಆರ್ ಮಾತನಾಡಿ, 2023-24 ರಲ್ಲಿ ಬಾಲ್ಯವಿವಾಹಕ್ಕೆ ಸಂಬAಧಿಸಿದ ಸ್ವೀಕರಿಸಿದ ದೂರುಗಳು ಮತ್ತು ತಡೆಹಿಡಿದ ಮಾಹಿತಿಗಳನ್ನು ತಿಳಿಸಿದರು. ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ 3 ತಿಂಗಳಿಗೊಮ್ಮೆ ಮಹಿಳೆ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಸಭೆಯನ್ನು ನಡೆಸಲು ತಿಳಿಸಿದಂತೆ, ಜನವರಿ-2024ರ ಮಾಹೆಯಲ್ಲಿ ಎಲ್ಲಾ ಪಂಚಾಯತಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಸಭೆಯನ್ನು ಸಂಬAಧಿಸಿದ ನೋಡಲ್ ಅಧಿಕಾರಿಗಳು ಸಭೆ ನಡೆಸಿ ಜಿಪಿಎಸ್ ಫೋಟೋ ಮತ್ತು ವರದಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೀಡಲು ಸೂಚಿಸಿದರು. ಬಾಲ್ಯವಿವಾಹ ತಡೆದ ಅನುಸರಣಾ ಭೇಟಿಯ ವರದಿಯನ್ನು ನಿಗದಿಪಡಿಸಿರುವ ಎಲ್ಲಾ ಇಲಾಖೆಯವರು ಭೇಟಿ ಮಾಡಿ ವರದಿಯನ್ನು ತಪ್ಪದೇ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೀಡಬೇಕು ಎಂದು ಹೇಳಿದರು.
ಸೀಡ್ಸ್, ಹೋಟೆಲ್, ಇಟ್ಟಂಗಿಬಟ್ಟಿ, ಉಸುಕು ವ್ಯಾಪಾರ, ಕೋಳಿಫಾರಂ ಮುಂತಾದೆಡೆ ಬಾಲಕಾರ್ಮಿಕರು ದುಡಿಯುತ್ತಿದ್ದು, ಕೈಗಾರಿಕೆಗಳಲ್ಲಿ ನಿಯೋಜಿತ ಅಧಿಕಾರಿಗಳು ಭೇಟಿ ನೀಡಿ ವರದಿ ಕೊಡಬೇಕು. ಬಾಲಕಾರ್ಮಿಕರು, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಬೇಕು. ಮುಂಬರುವ ಜನವರಿ-2024ರ ತಿಂಗಳಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಆಯೋಜಿಸುವ ಗ್ರಾಮ ಪಂಚಾಯತಿಗಳು ಮುಖ್ಯವಾಗಿ ಸಭೆಗೆ ಪ್ರೌಢಶಾಲಾ ಮಕ್ಕಳನ್ನು ಹಾಜರಿರುವಂತೆ ನೋಡಿಕೊಳ್ಳಬೇಕು. ಬಾಲ್ಯವಿವಾಹ ಹೆಚ್ಚಾಗಿ ಕಂಡುಬರುವ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆಯನ್ನು ರೂಪಿಸಬೇಕು. ಸಾಮೂಹಿಕ ವಿವಾಹಗಳ ಆಯೋಜಕರು ಕಡ್ಡಾಯವಾಗಿ ಅಧ್ಯಕ್ಷರು/ತಹಶೀಲ್ದಾರರ ಅನುಮತಿಯನ್ನು ಪಡೆಯತಕ್ಕದ್ದು ಹಾಗೂ ವಧು-ವರರ ವಯಸ್ಸಿನ ದಾಖಲೆಗಳನ್ನು ನಿಗದಿತ ಸಮಯದಲ್ಲಿ ನೀಡತಕ್ಕದ್ದು. ಸಾಮೂಹಿಕ ವಿವಾಹಗಳ ಆಯೋಜಕರು ಸಂಸ್ಥೆ/ಕಮಿಟಿಯನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಮತ್ತು ನಗರಸಭೆ ಸಿಬ್ಬಂದಿಗಳು, ಮೇಲ್ವಿಚಾರಕಿಯರು, ಮಕ್ಕಳ ಸಹಾಯವಾಣಿ-1098 ಕೊಪ್ಪಳ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!