ಯುವ ನಿಧಿ ಯೋಜನೆಗೆ ನೋಂದಣಿ ಆರಂಭ
ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಡಿಸೆಂಬರ್ 26 ರಂದು ಯುವ ನಿಧಿ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ಇದರ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಯುವಜನರ ಬಳಿಗೆ ಯುವ ನಿಧಿಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಬುಧವಾರದಂದು ಪೋಸ್ಟರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ವಿನಿಮಯ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು, ಇಲಾಖೆಯ ಸಹಾಯಕ ನಿರ್ದೇಶಕರು, ಸಹಾಯಕ ಸಾಂಖ್ಯಿಕ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಯುವನಿಧಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರತಿ ತಿಂಗಳಿಗೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500/-ರಂತೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು.
2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವ (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು) ಫಲಾನುಭವಿಗಳು ನೋಂದಣಿಗೆ ಅಗತ್ಯವಿರುವ ದಾಖಲಾತಿಗಳಾದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳೊಂದಿಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದು.
ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ https://sevasindhugs. karnataka.gov.in ಗೆ ಭೇಟಿ ನೀಡಬೇಕು. ಅಥವಾ ಉಚಿತವಾಗಿ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಸಿಕವಾಗಿ ಸ್ವಯಂ ಘೋಷಿತ ನಿರುದ್ಯೋಗ ಪ್ರಮಾಣ ಪತ್ರ ದೃಢೀಕರಣ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ವಿನಿಮಯ ಅಧಿಕಾರಿಗಳು, ವಿವಿಧ ಇಲಾಖೆಯ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು, ಇಲಾಖೆಯ ಸಹಾಯಕ ನಿರ್ದೇಶಕರು, ಸಹಾಯಕ ಸಾಂಖ್ಯಿಕ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಯುವನಿಧಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಪ್ರತಿ ತಿಂಗಳಿಗೆ ಪದವೀಧರರಿಗೆ ರೂ.3,000/- ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500/-ರಂತೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು.
2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವ (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು) ಫಲಾನುಭವಿಗಳು ನೋಂದಣಿಗೆ ಅಗತ್ಯವಿರುವ ದಾಖಲಾತಿಗಳಾದ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳೊಂದಿಗೆ ಹೆಸರು ನೋಂದಣಿ ಮಾಡಿಕೊಳ್ಳಬಹುದು.
ಫಲಾನುಭವಿಗಳು ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ https://sevasindhugs.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 18005999918 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.