ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯದ ಉದ್ಘಾಟನೆ
—
ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರ ಕೊಪ್ಪಳ ಜಿಲ್ಲಾ ಕೇಂದ್ರದ ಕಾರ್ಯಾಲಯದ ಉದ್ಘಾಟನಾ ಸಮಾರಂಭ ಜೂನ್ 12ರಂದು ನಡೆಯಿತು.
ಕೊಪ್ಪಳ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವರು, ಪೂರ್ವ ನಿಗದಿಯಂತೆ ಮಧ್ಯಾಹ್ನ ವೇಳೆ ಕೊಪ್ಪಳ ನಗರಕ್ಕೆ ಆಗಮಿಸಿ ಬಳಿಕ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿದರು. ಬಳಿಕ ಸಚಿವರು, ತಳಿರು ತೋರಣಗಳಿಂದ ಶೃಂಗರಿಸಿದ್ದ ಜಿಲ್ಲಾಡಳಿತ ಭವನದಲ್ಲಿನ ತಮ್ಮ ಕಾರ್ಯಾಲಯಕ್ಕೆ ಆಗಮಿಸಿದರು. ಸಚಿವರು ಮೊದಲಿಗೆ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿಗಳು ಮತ್ತು ಇನ್ನಿತರರು ಇದ್ದರು.
ಸಾರ್ವಜನಿಕ ಅಹವಾಲು: ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ನೇರವಾಗಿ ತಮ್ಮ ಕಾರ್ಯಾಲಯಕ್ಕೆ ಆಗಮಿಸಿದರು. ಇದೆ ವೇಳೆ ಅಲ್ಲಿ ನೆರೆದಿದ್ದ ಸಾರ್ವಜನಿಕರ ನಾನಾ ಅಹವಾಲುಗಳನ್ನು ಆಲಿಸಿದರು.
Comments are closed.