ಹೊತ್ತಿ ಉರಿದ ಪಂಪಾಸರೋವರದ ಕುಟೀರ
ಗಂಗಾವತಿ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪಂಪಾಸರೋವರದ ಬಳಿ ಇರುವ ಕುಟೀರ ಬೆಂಕಿಗೆ ಆಹುತಿಯಾಗಿದೆ. ಇದನ್ನು ಶಾಸಕ ಜನಾರ್ಧನರೆಡ್ಡಿ ನಿರ್ಮಿಸಿದ್ದರು ಎನ್ನಲಾಗಿದೆ. ಈ ಕುಟೀರಕ್ಕೆ ಆಕಸ್ಮಿಕ ಬೆಂಕಿ ತಗುಲಿ ದುರ್ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕುಟೀರದಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹೊತ್ತಿಕೊಂಡಿದೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಶಾಸಕ ಜನಾರ್ದನ ರೆಡ್ಡಿ ಬೆಂಬಲಿಗರು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Comments are closed.