Get real time updates directly on you device, subscribe now.
ಡಿಸೆಂಬರ್ 30ರಂದು ರಾಯಚೂರು ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್ ಮೂಲಕ ರಾಯಚೂರು ಜಿಲ್ಲೆಗೆ ತೆರಳಲಿದ್ದಾರೆ.
ಡಿಸೆಂಬರ್ 30ರ ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 10.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçಪ್‌ಗೆ ಆಗಮಿಸುವರು. ಬೆಳಗ್ಗೆ 10.30ಕ್ಕೆ ಗಿಣಿಗೇರಾ ಏರ್‌ಸ್ಟಿçಪ್‌ನಿಂದ ನಿರ್ಗಮಿಸಿ ರಾಯಚೂರು ಜಿಲ್ಲೆಯ ಸಿಂಧನೂರ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತೆರಳಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಕೆ.ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.