ಇ ಕೆವೈಸಿ ಮಾಡಿಸಿದರೆ ಸಬ್ಸಿಡಿ ಕೇವಲ ವದಂತಿ: ಆಹಾರ ಇಲಾಖೆಯಿಂದ ಸ್ಪಷ್ಟೀಕರಣ

Get real time updates directly on you device, subscribe now.

ಗ್ಯಾಸ್ ಏಜೆನ್ಸಿಗಳಿಗೆ ದಿನಾಂಕ 31-12-2023ರ ಒಳಗಾಗಿ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಮತ್ತು ಇ-ಕೆವೈಸಿ ಕಾರ್ಯಾಕ್ಕೆ ಹಣ ನೀಡಬೇಕೆಂಬ ವದಂತಿಯು ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿದೆ. ಈ ವಿಷಯವು ಕೇವಲ ವದಂತಿಯಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ ಕುರಿ ಅವರು ಸ್ಪಷ್ಠೀಕರಣ ನೀಡಿದ್ದಾರೆ.
ಅಡುಗೆ ಅನಿಲ ಗ್ರಾಹಕರು ತಮ್ಮ ಏಜೆನ್ಸಿಗೆ ತೆರಳಿ ಇ-ಕೆವೈಸಿ ನೀಡಬಹುದಾಗಿದೆ. ಅದು ಸಹ ಉಚಿತವಾಗಿ ನೀಡಬಹುದು. ಆದರೆ, ಕೇಂದ್ರ ಸರ್ಕಾರವು ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಿರುವುದಿಲ್ಲ. ಉಜ್ವಲ ಯೋಜನೆಯ ಗ್ಯಾಸ್ ಸಂಪರ್ಕ ಪಡೆದಿರುವವರು ಇ-ಕೆವೈಸಿ ಮೊದಲು ಆದ್ಯತೆಯಾಗಿ ನೀಡಬೇಕಾಗಿದೆ. ಉಳಿದಂತೆ ಗ್ಯಾಸ್ ಸಂಪರ್ಕ ಹೊಂದಿರುವವರು ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಸಂಬAಧಿಸಿದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಇ-ಕೆವೈಸಿ ನೀಡಬಹುದಾಗಿದೆ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!