ವಿವಿಧ ಯೋಜನೆಗಳಿಂದ  ಸ್ವಾವಲಂಬಿ ಜೀವನ: ಸಂಸದರಾದ ಕರಡಿ ಸಂಗಣ್ಣ

Get real time updates directly on you device, subscribe now.

ಸಂಸದರಾದ ಕರಡಿ ಸಂಗಣ್ಣ ಅವರು ಡಿಸೆಂಬರ್ 29ರಂದು ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದಲ್ಲಿ ನಮ್ಮ ಸಂಕಲ್ಪ ವಿಕಸಿತ ಭಾರತ ಅಭಿಯಾನದಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಈ ವೇಳೆ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದಾಗಿ ಜನರು ಸ್ವಾವಲಂಬಿ ಜೀವನ ನಡೆಸುವಂತಾಗಿದೆ ಎಂದು ತಿಳಿಸಿದರು. ಈ ವೇಳೆ ಗ್ರಾಮಸ್ಥರು ಹಾಜರಿದ್ದರು.
ವಣಗೇರಿ ಬೇವೂರಗಳಲ್ಲಿ ಸಂಚಾರ: ಸಂಸದರಾದ ಕರಡಿ ಸಂಗಣ್ಣ ಅವರು ಡಿಸೆಂಬರ್ 28ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ವಣಗೇರಿ ಮತ್ತು ಬೇವೂರ ಗ್ರಾಮಗಳಲ್ಲಿ ಸಂಚರಿಸಿದರು.
ಕೇAದ್ರ ಸರ್ಕಾರದ ಉಜ್ವಲ ಯೋಜನೆಯಡಿ ವಣಗೇರಿ ಮತ್ತು ಬೇವೂರ ಗ್ರಾಮಗಳಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಹಾಗೂ ಸಿಲಿಂಡರ್ ವಿತರಿಸಿದರು.
ಇದೆ ವೇಳೆ ಮಾತನಾಡಿದ ಸಂಸದರು, ಪಿ.ಎಂ. ವಿಶ್ವಕರ್ಮ, ಉಜ್ವಲ ಯೋಜನೆ, ಜಲಜೀವನ ಮಿಷನ್, ಮುದ್ರಾ, ಕೃಷಿ ಸಮ್ಮಾನ್, ಜನ್‌ಧನ್ ಸೇರಿದಂತೆ ಅನೇಕ ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದು, ಇದರ ಸದುಪಯೋಗ ಪಡೆಯಬೇಕು ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ವಿವಿಧ ಗ್ರಾಮದ ಪ್ರಮುಖರು ಮತ್ತು ಗ್ರಾಮಸ್ಥರು ಇದ್ದರು.

Get real time updates directly on you device, subscribe now.

Comments are closed.

error: Content is protected !!