ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರ ತಾಲ್ಲೂಕುವಾರು ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ನಲಿನ್ ಅತುಲ್
ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಪ್ರಕ್ರಿಯೆಯು ನಿರಂತರ ಪ್ರಕ್ರಿಯೆಯಾಗಿದ್ದು, ಅರ್ಹತಾ ದಿನಾಂಕ: 01-11-2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ ದಿನಾಂಕ:01-11-2020 ಕ್ಕಿಂತಲೂ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ(ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾದ ಅಂಕಪಟ್ಟಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಹಾಗೂ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Comments are closed.