ಹದಿಹರೆಯದ ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಕಾರ್ಯಕ್ರಮ ರೂಪಿಸಿ : ಜಿಲ್ಲಾಧಿಕಾರಿ ನಲಿನ್ ಅತುಲ್
: ಹದಿಹರೆಯದ ಹೆಣ್ಣು ಮಕ್ಕಳಿಗೆ ಔಪಚಾರಿಕ ಶಿಕ್ಷಣ ಹಾಗೂ ಕೌಶಲಗಳನ್ನು ಕಲಿಸುವುದರೊಂದಿಗೆ ಸಾಮಾಜಿಕವಾಗಿ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕೂಡ ಕಲಿಸಬೇಕು. ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆಗೆ ಕಾರ್ಯಕ್ರಮ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಹದಿಹರೆಯದ ಹೆಣ್ಣುಮಕ್ಕಳಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುವುದರ ಮೂಲಕ ಅವರ ಆಹಾರ ಪದ್ಧತಿ ಮತ್ತು ಪೌಷ್ಟಿಕಾಂಶ ಮಟ್ಟದಲ್ಲಿ ಸುಧಾರಣೆ, ಮುಟ್ಟಿನ ನೈರ್ಮಲ್ಯ ಅಭ್ಯಾಸಗಳು, ಲೈಂಗಿಕ ಆರೋಗ್ಯ, ಲಿಂಗಾಧಾರಿತ ದೌರ್ಜನ್ಯದ ನಿವಾರಣೆ ಮತ್ತು ಅವರ ಮಾನಸಿಕ ಆರೋಗ್ಯವನ್ನು ಸುಧಾರಿಸುವ ಮೂಲಕ ಅವರನ್ನು ಸಬಲೀಕರಣಗೊಳಿಸುವ ಮಹತ್ವಾಕಾಂಕ್ಷೆಗಳೊAದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಔಪಚಾರಿಕ ಶಿಕ್ಷಣದೊಂದಿಗೆ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕಲಿಸಬೇಕು ಎಂದು ಅವರು ಹೇಳಿದರು.
ಸ್ಫೂರ್ತಿ ಯೋಜನೆ ಕೆ.ಹೆಚ್.ಪಿ.ಟಿ ಸಂಸ್ಥೆಯು ಹದಿಹರೆಯದ ಹೆಣ್ಣುಮಕ್ಕಳ ಕುಟುಂಬ, ಹುಡುಗರು ಮತ್ತು ಸಮುದಾಯದ ಗುಂಪುಗಳ ಜೊತೆ ಕೆಲಸ ಮಾಡುವುದರ ಮೂಲಕ ಅವರ ಒಟ್ಟು ಬದುಕಿನ ಗುಣಮಟ್ಟವನ್ನು ಸುಧಾರಿಸಲು, ಕರ್ನಾಟಕ ರಾಜ್ಯದ ಏಳು ಆಯ್ದ ಜಿಲ್ಲೆಗಳಲ್ಲಿ ಸ್ಫೂರ್ತಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಯು ಹದಿಹರೆಯದ ಹೆಣ್ಣುಮಕ್ಕಳಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುವುದರ ಮೂಲಕ ಅವರ ಆಹಾರ ಪದ್ಧತಿ ಮತ್ತು ಪೌಷ್ಟಿಕಾಂಶ ಮಟ್ಟದಲ್ಲಿ ಸುಧಾರಣೆಯನ್ನು ತರುವುದು, ಸುರಕ್ಷತೆ, ಆರೋಗ್ಯಕರ ಅಭ್ಯಾಸಗಳು ಮತ್ತು ಲಿಂಗ ಸಮಾನತೆ ಮಾನದಂಡಗಳನ್ನು ಸುಧಾರಿಸುವುದು ಈ ಯೋಜನೆಯ ಗುರಿಯಾಗಿದ್ದು, ಮಾದರಿ ಮತ್ತು ಸಮವರ್ತಿ ಹೆಣ್ಣು ಮಕ್ಕಳು ಶಿಕ್ಷಣ ಮುಂದುವರಿಸುವುದನ್ನು ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಹೆಣ್ಣು ಮಕ್ಕಳು ತಮ್ಮ ಮದುವೆಗೆ ಸಂಬAಧಿಸಿದ ನಿರ್ಧಾರ-ತೆಗೆದುಕೊಳ್ಳುವಿಕೆಯನ್ನು ಹೆಚ್ಚಿಸುವುದು, ಹೆಣ್ಣುಮಕ್ಕಳ ಪೌಷ್ಟಿಕಾಂಶದ ಮಟ್ಟ ಮತ್ತು ಭೌತಿಕ ದ್ರವ್ಯರಾಶಿ ಸೂಚಿಯನ್ನು ಹೆಚ್ಚಿಸುವುದಾಗಿದೆ. ಈ ಅಂಶಗಳನ್ನು ಒಳಗೊಂಡAತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆಯು ವಿವಿಧ ಕಾರ್ಯಕ್ರಮಗಳ ಮೂಲಕ ಜಿಲ್ಲೆಯ ಹದಿಹರೆಯದ ಹೆಣ್ಣುಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ತರಬೇತಿ ಹಾಗೂ ಸಂಪನ್ಮೂಲಗಳನ್ನು ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹೆಣ್ಣುಮಕ್ಕಳಿಗೆ ಮಹಿಳಾ ಸಾಧಕರೊಂದಿಗೆ ಕಲಿಕಾ ಭೇಟಿಗೆ ಏರ್ಪಾಡು ಮಾಡಬೇಕು. ಜೊತೆಗೆ ಹದಿಹರಿಯದವರ ಆರೋಗ್ಯ, ಸಮಸ್ಯೆಗಳು, ಪರಿಹಾರಗಳ ಕುರಿತು ಶಿಬಿರಗಳನ್ನು ಮಾಡಬೇಕು. ಪಾಲಕರೊಂದಿಗೆ ಮಕ್ಕಳ ಬಗ್ಗೆ ಚರ್ಚೆ ಮಾಡಬೇಕು. ಪ್ರಮುಖವಾಗಿ ಗ್ರಾಮದ ಮಕ್ಕಳ ಬೆಳವಣಿಗೆಗೆ ಕೈಜೋಡಿಸಬೇಕು. ಪಾಲಕರೊಂದಿಗೆ ಮಕ್ಕಳ ಕಾರ್ಯಚಟುವಟಿಕೆಗಳ ವಿಷಯಗಳ ಬಗ್ಗೆ ಚರ್ಚೆ ಮಾಡಬೇಕು. ಮಕ್ಕಳೂ ಕೂಡ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಶಾಲೆಗಳಲ್ಲಿ ಶಿಕ್ಷಕರು ತರಬೇತಿ ಪಡೆದು ಮಕ್ಕಳಿಗೆ ಲಿಂಗ, ಲಿಂಗತ್ವದ ಬಗ್ಗೆ ವಿವರವಾಗಿ ಕಾರ್ಯಕ್ರಮಗಳ ಮೂಲಕ ಮಾಹಿತಿ ನೀಡಬೇಕು. ಜೊತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯಗಳ ಬಗ್ಗೆ ತಿಳಿಸಬೇಕು. ಶಾಲೆಗಳಲ್ಲಿ ಗಂಡು ಹೆಣ್ಣಿನ ನಡುವೆ ಬೇಧಭಾವ ಮಾಡಬಾರದು. ಬಾಲ್ಯ ವಿವಾಹವನ್ನು ತಡೆಗಟ್ಟಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಲಿಂಗ, ಲಿಂಗತ್ವದ ಬಗ್ಗೆ ಮೊದಲು ಶಿಕ್ಷಕಿಯರಿಗೆ ತರಬೇತಿಯನ್ನು ಕೊಡಬೇಕು. ಅಪ್ರಾಪ್ತ ವಯಸ್ಸಿನಲ್ಲಿ ಬಾಲ್ಯವಿವಾಹವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಸಭೆಯನ್ನು ಮಾಡಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರಿಂದ ಕಿರುಕುಳ ಮತ್ತು ಹುಡುಗರಿಂದ ಚುಡಾಯಿಸುವುದನ್ನು ತಡೆಗಟ್ಟಬೇಕು. ಸರ್ಕಾರಿ ಯೋಜನೆಗಳ ಸೌಲಭ್ಯಗಳ ಲಭ್ಯತೆಯನ್ನು ಹೆಣ್ಣುಮಕ್ಕಳಿಗೆ ತಿಳಿಸಬೇಕು. ಸಹಾಯಕ ಶಿಕ್ಷಕರು ಸರ್ಕಾರದ ಯೋಜನೆಗಳನ್ನು ಶಿಕ್ಷಣ ರಂಗದಲ್ಲಿ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಹೇಳಿದರು.
ಕೆಹೆಚ್‌ಪಿಟಿ ಸಂಸ್ಥೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಮಂಜುನಾಥ ದೊಡವಾಡ ಅವರು ಮಾತನಾಡಿ, ಕೆಹೆಚ್‌ಪಿಟಿ ಸಂಸ್ಥೆಯು ಒಂದು ಲಾಭೇತರ ಸಂಸ್ಥೆಯಾಗಿದ್ದು, ಭಾರತದಲ್ಲಿ ಆರೋಗ್ಯ ಸುಧಾರಣೆ ಮತ್ತು ಸಮುದಾಯಗಳ ಯೋಗಕ್ಷೇಮವನ್ನು ಮುಖ್ಯ ಕೇಂದ್ರವಾಗಿಟ್ಟುಕೊAಡು ಮುನ್ನಡೆಯುತ್ತಿದೆ. ಕೆಹೆಚ್‌ಪಿಟಿ ಸಂಸ್ಥೆಯನ್ನು ಕರ್ನಾಟಕದಲ್ಲಿ ಹೆಚ್.ಐ.ವಿ. ಹರಡುವಿಕೆಯನ್ನು ಕಡಿಮೆ ಮಾಡುವ ಏಕೈಕ ಉದ್ದೇಶದಿಂದ 2003 ರಲ್ಲಿ ಸ್ಥಾಪಿಸಲಾಯಿತು. ಸಂಸ್ಥೆಯ ಉಪಕ್ರಮಗಳು ರಾಷ್ಟಿçÃಯ ಮತ್ತು ಜಾಗತಿಕ ಮಟ್ಟದಲ್ಲಿ ಮಾದರಿ ಕಾರ್ಯಕ್ರಮಗಳಾಗಿ ಗಮನಸೆಳೆದಿದೆ. ಹದಿಹರೆಯದವರ ದೈಹಿಕ, ಮಾನಸಿಕ ಆರೋಗ್ಯವನ್ನು ಸದೃಢಗೊಳಿಸಬೇಕು. ಸಮಗ್ರ ಸಾಮಾಜಿಕ ಪ್ರತಿಷ್ಠೆ ಹಾಳಾಗುವ ಭಯದಿಂದ ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸುವುದರಿಂದ ಪ್ರಯೋಜನವಿಲ್ಲ ಎಂಬ ನಂಬಿಕೆ ಹೋಗಲಾಡಿಬೇಕು. ಹೆಣ್ಣುಮಕ್ಕಳು ಗಂಡುಮಕ್ಕಳಿಗೆ ಸಮಾನವಾಗಿ ಶಿಕ್ಷಣ ಪಡೆಯಬೇಕು. ಹೆಣ್ಣುಮಕ್ಕಳು ತಮ್ಮ ಕಾಲ ಮೇಲೆ ತಾವು ನಿಲ್ಲುವಂತಾಗಬೇಕು. ಹದಿಹರೆಯದ ಹುಡುಗಿಯರ ಸಮಸ್ಯೆಗಳು ಮತ್ತು ಯೋಜನೆಯ ಚಟುವಟಿಕೆಗಳ ವಿನ್ಯಾಸವನ್ನು ಪಾಲಕರಿಗೆ ಮನವೊಲಿಸುವಂತೆ ಕೆಲಸ ಮಾಡುವುದು, ಹದಿಹರೆಯದ ಹೆಣ್ಣು ಮಕ್ಕಳಿಗೆ ಜೀವನದ ಕೌಶಲ್ಯ, ಶಿಕ್ಷಣ ಮೌಲ್ಯವನ್ನು ಬೆಳೆಸುವುದು ಕಾರ್ಯಕ್ರಮದ ಭಾಗವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಕೊಪ್ಪಳ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮದ ಪ್ರಕಾಶ ವಿ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ಅಧಿಕಾರಿಗಳಾದ ಪ್ರಾಣೇಶ ಎಸ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶಿವಾನಂದ ವಿ.ಪಿ, ಸೇರಿದಂತೆ ವಿವಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.