ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಪ್ಪಳ ಜಿಲ್ಲೆಯ ಖಾಸಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

Get real time updates directly on you device, subscribe now.

ವಿಜಯಪುರ ಜಿಲ್ಲೆಯ ಪ್ರವಾಸದಲ್ಲಿದ್ದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 02ರಂದು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಹತ್ತಿರದ ಖಾಸಗಿ ವಿಮಾನ ನಿಲ್ದಾಣವಾದ ಎಂಎಸ್‌ಪಿಎಲ್ ಏರೋಡ್ರಮ್‌ಗೆ ಆಗಮಿಸಿದರು.
ಪೂರ್ವ ನಿಗದಿಯಂತೆ ಬೆಂಗಳೂರಿನ ಹೆಎಚ್‌ಎಲ್ ವಿಮಾನ ನಿಲ್ದಾಣದಿಂದ ಹೊರಟು ಬೆಳಗಿನ 11.20ರ ಸುಮಾರಿಗೆ ಕೊಪ್ಪಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಮುಖಂಡರಾದ ಬಸವರಾಜ ಹಿಟ್ನಾಳ, ರಾಜಶೇಖರ ಹಿಟ್ನಾಳ, ಜನಾರ್ಧನ ಹುಲಗಿ, ಶ್ರೀಮತಿ ಕಿಶೋರಿ ಬೂದನೂರ, ಗೂಳಪ್ಪ ಹಲಗೇರಿ ಸೇರಿದಂತೆ ಇತರೆ ಗಣ್ಯರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.
ಬಳಿಕ ಮುಖ್ಯಮಂತ್ರಿಗಳು ಹೆಲಿಕಾಪ್ಟರ್ ಮೂಲಕ ವಿಜಯಪುರ ಜಿಲ್ಲೆಗೆ ಪ್ರಯಾಣ ಬೆಳೆಸಿದರು. ಮುಖ್ಯಮಂತ್ರಿ ಅವರೊಂದಿಗೆ ಧಾರವಾಡ ಗ್ರಾಮೀಣ ಶಾಸಕರಾದ ವಿನಯ ಕುಲಕರ್ಣಿ ಅವರು ವಿಜಯಪುರಕ್ಕೆ ತೆರಳಿದರು.
ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ, ತರಬೇತಿ ವಿಭಾಗದ ಎಡಿಜಿಪಿ ಬಿ.ಎಸ್. ಲೋಕೇಶ ಕುಮಾರ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕರಾದ ನಿರಂಜನ ಅರಸ, ಕೊಪ್ಪಳ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಶರಣಬಸಪ್ಪ ಸುಬೇದಾರ, ಸಿದ್ದಲಿಂಗಪ್ಪಗೌಡ ಪಾಟೀಲ, ತಹಸೀಲ್ದಾರರಾದ ವಿಠ್ಠಲ್ ಚೌಗಲಾ, ಜಿಪಂ ಯೋಜನಾ ನಿರ್ದೇಶಕರಾದ ಪಿ.ಕೃಷ್ಣಮೂರ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ದುಂಡಪ್ಪ ತುರಾದಿ, ಪೊಲೀಸ್ ಅಧಿಕಾರಿಗಳಾದ ಮಹಾಂತೇಶ ಸಜ್ಜನ, ಸಂತೋಷ ಹಳ್ಳೂರ, ನಿಂಗಪ್ಪ ಎನ್., ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಟಿ. ಲಿಂಗರಾಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಷ ಸಿರಸಗಿ ಸೇರಿದಂತೆ ಇನ್ನಿತರ ಇಲಾಖೆಯ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!