ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಆಯ್ಕೆ 

Get real time updates directly on you device, subscribe now.

ಕೊಪ್ಪಳ ಜ. ೦೩: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮಹಿಳೆಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ದಿನಾಂಕ ೦೧, ೦೨ಡಿಸೆಂಬರ್, ೨೦೨೩ರಂದು ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿಯಲ್ಲಿ ಜರುಗಿತ್ತು. ಸದರಿ ಸ್ಪರ್ಧೆಯಲ್ಲಿ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯ, ಕೊಪ್ಪಳ ಮಹಾವಿದ್ಯಾಲಯದ ವಿದ್ಯಾರ್ಥಿನಿಆಯ್ಕೆಯಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ,ಬೆಳಗಾವಿಯಲ್ಲಿ ದಿನಾಂಕ ೦೨-೦೧-೨೦೨೪ ರಿಂದ ೦೫-೦೧-೨೦೪ರವರೆಗೆ ನಡೆಯುವ ದಕ್ಷಿಣ ವಲಯ ಅಂತರ್ ವಿಶ್ವದ್ಯಾಲಯಗಳ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಮಹಾವಿದ್ಯಾಲಯವ ವಿದ್ಯಾರ್ಥಿನಿಯಾದ ಕು. ತ್ರಿವೇಣಿ ಮೇಟಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ. ಸದರಿ ವಿದ್ಯಾರ್ಥಿನಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ. ಆರ್ ಮರೇಗೌಡ ಮತ್ತು ಶ್ರೀ ಗವಿಸಿದ್ಧೇಶ್ವರ ಟ್ರಸ್ಟಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರಾದ ಡಾ. ಚನ್ನಬಸವ,ಕಾಲೇಜಿನ ದೈಹಿಕ ನಿರ್ದೇಶಕರಾದ ವಿನೋದ ಸಿ. ಮುದಿನಬಸವಗೌಡರ ಹಾಗೂ ಕಾಲೇಜಿನ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!