ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಿದ್ಧತಾ ಸಭೆ
* ಕುಡಿವ ನೀರು, ವಾಹನ ಪಾರ್ಕಿಂಗ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಸೂಚನೆ
* ನಗರಸಭೆ, ಆರೋಗ್ಯ, ಜೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ

ನಾಡ ಪ್ರಸಿದ್ಧ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮೊದಲ ಹಂತದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಜನವರಿ 3ರಂದು ನಡೆಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಪ್ರಸಿದ್ಧ ಶ್ರೀಗವಿಸಿದ್ದೇಶ್ವರ ಜಾತ್ರೋತ್ಸವ ಹಿನ್ನೆಲೆಯಲ್ಲಿ ಜನವರಿ 13ರಿಂದಲೇ ಗವಿಶ್ರೀ ಮಠಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಲಿದೆ. ರಥೋತ್ಸವ ದಿನದಿಂದ ಬಹಳಷ್ಟು ಸಂಖ್ಯೆಯಲ್ಲಿ ಭಕ್ತರು ಶ್ರೀಮಠದ ಆವರಣದಲ್ಲಿಯೇ ವಾಸ್ತವ್ಯ ಮಾಡುತ್ತಾರೆ. ಈ ಭಾರಿ ಬಸ್ಸಿನ ಸೌಕರ್ಯ ಇರುವುದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಶ್ರೀಮಠಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವಂತೆ ವಿವಿಧೆಡೆ ಅಚ್ಚುಕಟ್ಟಾಗಿ ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಜಾತ್ರೋತ್ಸವ ದಿನದಂದು ಶ್ರೀಮಠದ ರಥೋತ್ಸವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ಆ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದAತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಠದ ಆವರಣದ ನಾಲ್ಕೂ ದಿನಕ್ಕಿನಲ್ಲಿ ಅಗ್ನಿಶಾಮಕ ವಾಹನಗಳು ಇರಬೇಕು ಎಂದು ತಿಳಿಸಿದರು. ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ಸಂಚರಿಸಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳು ಈ ಬಗ್ಗೆ ಮುತುವರ್ಜಿ ವಹಿಸಬೇಕು. ಜನವರಿ 10 ರಿಂದ ಫೆಬ್ರವರಿ 10ರವರೆಗೆ ಆಯಾ ಇಲಾಖೆಗಳಿಗೆ ವಹಿಸಿದ ಎಲ್ಲಾ ಕಾರ್ಯಗಳು ಅಚ್ಚುಕಟ್ಟಾಗಿ ನಡೆಯುವಂತಾಗಬೇಕು. ಜಾತ್ರೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಿದ್ಧತಾ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ನಡೆಸಬೇಕು ಎಂದು ಸೂಚಿಸಿದರು.
ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ವಿವಿಧೆಡೆ ಸಿಸಿ ಕ್ಯಾಮರಾ ಅಳವಡಿಸಬೇಕು. ಅಗತ್ಯವಿದ್ಧಲ್ಲಿ ಜಾತ್ರಾ ಸ್ಥಳದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆ ನಿರ್ಮಿಸಬೇಕು. ವೃದ್ಧರು, ಮಹಿಳೆಯರು, ಮಕ್ಕಳು ಮತ್ತು ವಿಕಲಚೇತನರು ಪಾರ್ಕಿಂಗ್ ಸ್ಥಳದಿಂದ ಶ್ರೀಮಠಕ್ಕೆ ಆಗಮಿಸಲು ಅನುಕೂಲವಾಗುವಂತೆ, ಪರವಾನಿಗೆ ಹೊಂದಿದ ಸುಸಜ್ಜಿತ ಆಟೋಗಳನ್ನು ಮಾತ್ರ ನಿರ್ಭಂಧಿತ ಸ್ಥಳಕ್ಕೆ ಪ್ರಯಾಣಿಸಲು ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಎಂದು ಇದೆ ವೇಳೆ ಶಾಸಕರು ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾತನಾಡಿ, ರಥೋತ್ಸವ ದಿನದಂದು ಲಕ್ಷಾಂತರ ಭಕ್ತರು ಮತ್ತು ಇನ್ನುಳಿದ ದಿನಗಳಲ್ಲಿ ಸಹ ಪ್ರತಿ ದಿನ 3 ರಿಂದ 4 ಲಕ್ಷ ಭಕ್ತರು ಶ್ರೀಮಠಕ್ಕೆ ಆಗಮಿಸುತ್ತಾರೆ. ಜನವರಿ 23 ರಿಂದ ಜನವರಿ 29ರವರೆಗೆ ಗವಿಸಿದ್ದೇಶ್ವರ ಸಂಸ್ಥಾನ ಶ್ರೀಗವಿಮಠದಿಂದ ವಿವಿಧ ಕಾರ್ಯಕ್ರಮಗಳು ಇರುತ್ತವೆ. ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರ ದಾಸೋಹ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ ಎನ್ನುವ ಮಾಹಿತಿ ಇರುತ್ತದೆ. ಆದ್ದರಿಂದ ನಗರಸಭೆಯ ಅಧಿಕಾರಿಗಳು ಸ್ವಚ್ಛತೆಗೆ, ಕುಡಿಯುವ ನೀರಿನ ಸೌಕರ್ಯಕ್ಕೆ ಮತ್ತು ವಾಹನ ಸೌಲಭ್ಯಕ್ಕೆ ವಿಶೇಷ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು ಎಂದು ಪೌರಾಯುಕ್ತರಾದ ಗಣಪತಿ ಪಾಟೀಲ ಅವರಿಗೆ ಸೂಚಿಸಿದರು.
ಶ್ರೀಮಠಕ್ಕೆ ಸಂಪರ್ಕ ಇರುವ ಎಲ್ಲಾ ರಸ್ತೆಗಳ ರಿಪೇರಿ ಮತ್ತು ಪ್ರತಿ ದಿನ ಕಸ ತೆಗೆಯುವ ವ್ಯವಸ್ಥೆ ಮಾಡಬೇಕು. ಜನವರಿ 21ರಿಂದ ಫೆಬ್ರವರಿ 10ರವರೆಗೆ ಶ್ರೀಮಠದ ಸುತ್ತಲು, ಮಹಾದಾಸೋಹ ಸಂಪರ್ಕ ರಸ್ತೆಗಳು, ಜಾತ್ರಾ ಅಂಗಡಿ, ತೇರು ಸಾಗುವ ಆವರಣ, ವಾಹನ ಪಾರ್ಕಿಂಗ್ ಸ್ಥಳಗಳಲ್ಲಿ ಕಸ ವಿಲೇವಾರಿ ಮಾಡಿ ಧೂಳು ಬಾರದಂತೆ ನೀರಿನ ವ್ಯವಸ್ಥೆ ಮಾಡಬೇಕು. ಈ ಕಾರ್ಯಕ್ಕಾಗಿ ಅಗತ್ಯ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಬೇಕು. ಯಾತ್ರಾರ್ಥಿಗಳಿಗೆ ನೀಡುವ ಕಾಲೇಜ್, ಶಾಲೆ, ಯಾತ್ರಿ ನಿವಾಸ, ವೃದ್ಧಾಶ್ರಮ ಹಾಗೂ ಶ್ರೀಮಠದ ಆವರಣದ ವಸತಿ ಸ್ಥಳಗಳಲ್ಲಿ ಶುಚಿತ್ವ ಇರಬೇಕು. ಸೊಳ್ಳೆಗಳು ಬರದಂತೆ ಫಾಗಿಂಗ್ ಮಾಡಿಸಬೇಕು. ಡಿಟಿಟಿ ಪುಡಿ ಹಾಕಬೇಕು. ಸಾರ್ವಜನಿಕ ಶೌಚಾಲಯಗಳಲ್ಲಿ ಸಹ ಶುಚಿತ್ವ ಕಾಯ್ದುಕೊಳ್ಳಬೇಕು. ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ರೀತಿಯ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಶ್ರೀಮಠದ ಕೋರಿಕೆಯಂತೆ ಶ್ರೀಮಠಕ್ಕೆ ಸರಬರಾಜು ಆಗುವ ನೀರಿನ ಮತ್ತು ಈ ಮಾರ್ಗವಾಗಿ ರಿಪೇರಿ ಹಾಗೂ ವಾಲ್ ಲೀಕ್ ಆಗದಂತೆ ನೋಡಿಕೊಳ್ಳಬೇಕು. ಮಹಾ ದಾಸೋಹಕ್ಕೆ ಕುಡಿಯುವ ನಿರಂತರ ನೀರು, ಮಠದ ನೂತನ ಕಾಂಪ್ಲೆಕ್ಸ್, ಗವಿಸಿದ್ದೇಶ್ವರ ಕಾಲೇಜ್ ಆವರಣ, ಶ್ರೀಮಠದ ಯಾತ್ರಿ ನಿವಾಸ ಸೇರಿದಂತೆ ವಿವಿಧೆಡೆ ನೀರು ಪೂರೈಸಬೇಕು. ಶ್ರೀಮಠಕ್ಕೆ ಸರಬರಾಜು ಆಗುವ ಎಲ್ಲಾ ನೀರುಗಳಿಗೆ ಹಾಗೂ ಶ್ರೀಮಠದ ಕೆರೆ ಬಾವಿಗಳಿಗೆ ಬ್ಲಿಚಿಂಗ್ ಪೌಡರ್ ಹಾಕಿಸಬೇಕು. ತಾತ್ಕಾಲಿಕ ಸ್ನಾನ ಗೃಹ ಮತ್ತು ಶೌಚಾಲಯಗಳಿಗೆ ನೀರು ಪೂರೈಕೆ ಮಾಡಬೇಕು. ಯಾತ್ರಿಕರಿಗೆ ವಸತಿ ಒದಗಿಸಿದ ಸ್ಥಳಗಳಿಗೆ ಸಹ ನೀರು ಪೂರೈಕೆಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಆಹಾರ ಸುರಕ್ಷಾ ಅಧಿಕಾರಿಗಳು ಗವಿಮಠದ ಅಡುಗೆ ಸಿಬ್ಬಂದಿಯೊAದಿಗೆ ವಿಶೇಷ ಸಭೆ ನಡೆಸಿ ಆಹಾರ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಾತ್ರೆ ನಡೆಯುವ ಸ್ಥಳದಲ್ಲಿ ತುರ್ತು ಆರೋಗ್ಯ ಘಟಕ ಸ್ಥಾಪಿಸಲು ಕರ್ತವ್ಯಕ್ಕೆ ತಜ್ಞವೈದ್ಯರನ್ನು ಮತ್ತು ಶುಶ್ರೂಕಿಯರನ್ನು ನಿಯೋಜಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ಈಗಿನಿಂದಲೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಬಹುದೊಡ್ಡ ಪ್ರಮಾಣದಲ್ಲಿ ಜಾತ್ರೋತ್ಸವ ನಡೆಯುವುದರಿಂದ ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ ಅವರು ಮಾತನಾಡಿ, ಸ್ವಚ್ಛತೆ, ನೀರಿನ ವ್ಯವಸ್ಥೆ, ಸ್ಯಾನಿಟೈಜ್, ಘನತಾಜ್ಯ ನಿರ್ವಹಣೆಗೆ ಎಲ್ಲಾ ರೀತಿಯ ಕ್ರಮ ವಹಿಸಲಾಗುವುದು. ಸ್ವಚ್ಛತೆ ಸೇರಿದಂತೆ ಇನ್ನೀತರ ಕಾರ್ಯಕ್ಕಾಗಿ ಹೆಚ್ಚುವರಿಯಾಗಿ ಬೇರೆ ಕಡೆಗಳಿಂದ ಪೌರ ಕಾರ್ಮಿಕರನ್ನು ಮತ್ತು ಇನ್ನೀತರ ಹೆಚ್ಚುವರಿ ಕಾರ್ಮಿಕರನ್ನು ಪಡೆದುಕೊಳ್ಳಲಾಗುವುದು. ತಾತ್ಕಾಲಿಕವಾಗಿ ಜಾತ್ರಾ ಆವರಣದಲ್ಲಿ ನಿರ್ಮಿಸಿದ ಶೌಚಾಲಯಗಳ ಸ್ವಚ್ಛತೆಗೆ ಸಕ್ಕಿಂಗ್ ಮಸೀನ್ ವ್ಯವಸ್ಥೆ, ಜಾತ್ರೆಯ ಆವರಣ ಮತ್ತು ಶ್ರೀಮಠದ ಸಂಪರ್ಕ ರಸ್ತೆಗಳು ಧೂಳು ಬಾರದಂತೆ ನೀರನ್ನು ಜಲಿಪೈಪ್ ಟ್ರಾಕ್ಟ ರ್ ಮೂಲಕ ಹಾಕಲಾಗುವುದು. ಜಾತ್ರಾ ಆವರಣದ ಕಸ ವಿಲೇವಾರಿಗೆ ಅಗತ್ಯ ಸಂಖ್ಯೆಯಲ್ಲಿ ಟ್ರಾಕ್ಟರ್, ಕಸ ವಿಲೇವಾರಿ ಮಾಡುವ ವಾಹನಗಳು ಮತ್ತು ಜಾತ್ರಾ ದಾಸೋಹ ಮುಸುರಿಗೆ ಟ್ರಾಲಿ ವ್ಯವಸ್ಥೆ ಮಾಡಲಾಗುವುದು. ಜನವರಿ 10ರಿಂದ ಫೆಬ್ರವರಿ 10ರವರೆಗೆ ಸ್ವಚ್ಛತೆಗೆ ಪೌರ ಕಾರ್ಮಿಕರನ್ನು ನೇಮಿಸಲಾಗುವುದು. ನಗರಸಭೆಯಿಂದ ಬರುವ ವಾಹನಗಳ ನಿರ್ವಹಣೆಗೆ ಸಿಬ್ಬಂದಿ ನೇಮಕಕ್ಕೆ, ಜಾತ್ರಾ ಆವರಣದಲ್ಲಿ ಬೀದಿ ದೀಪಗಳನ್ನು ಹಾಕಲು, ಜಾತ್ರಾ ಆವರಣದಲ್ಲಿ ಶುದ್ಧ ಮತ್ತು ಆರೋಗ್ಯಯುತ ನೀರಿನ ಪೂರೈಕೆಗೆ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪೊಲೀಸ್ ಉಪಧೀಕ್ಷಕರಾದ ಸಿದ್ಧಲಿಂಗಪ್ಪಗೌಡ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ., ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Comments are closed.