ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Get real time updates directly on you device, subscribe now.

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ ಕಲ್ಯಾಣ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳು ಜನವರಿ 06 ಮತ್ತು 07 ರಂದು ಕೊಪ್ಪಳ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸುವ ಉದ್ದೇಶದಿಂದ ಜನವರಿ 06 ರಂದು ಮಧ್ಯಾಹ್ನ 02 ಗಂಟೆಯಿAದ ಸಂಜೆ 04 ಗಂಟೆಯವರೆಗೆ ಹಾಗೂ ಜನವರಿ 07 ರಂದು ಬೆಳಿಗ್ಗೆ 10 ಗಂಟೆಯಿAದ ಸಾಯಂಕಾಲ 04 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಸಿ.ಆರ್.ಪಿ.ಸಿ 1973 ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಭಾಗ್ಯನಗರದ ಸರ್ಕಾರಿ ಪಿಯು ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ, ಬಹದ್ದೂರಬಂಡಿಯ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯ, ಟಣಕನಕಲ್‌ನ ಆದರ್ಶ ವಿದ್ಯಾಲಯ(ಆರ್‌ಎಂಎಸ್‌ಎ), ಸರ್ಕಾರಿ ಬಾಲಕರ ಪಿಯು ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಬಾಲಕರ ಪಿಯು ಕಾಲೇಜು(ಪ್ರೌಢಶಾಲಾ ವಿಭಾಗ),  ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಎಸ್‌ಜಿ ಕಾಂಪೋಸಿಟ್ ಪ್ರೌಢಶಾಲೆ, ಶ್ರೀ ಗವಿಸಿದ್ದೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜುಗಳಲ್ಲಿ ಜ.06 ಮತ್ತು 07 ರಂದು ಪರೀಕ್ಷೆಗಳು ನಡೆಯಲಿವೆ.
ಆದೇಶದನ್ವಯ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. 200 ಮೀಟರ್ ಪರೀಕ್ಷಾ ಮೌಲ್ಯಮಾಪನ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.
ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: