ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ
*ಕಿಡದಾಳ ರೈಲ್ವೆ ಗೇಟ್ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಮಂಜೂರಾತಿ: ಸಂಸದರಿಂದ ಹರ್ಷ
—-
ಕೊಪ್ಪಳ : ಕೊಪ್ಪಳ ನಗರದ ಗಂಗಾವತಿ ರಸ್ತೆಯ ಕಿಡದಾಳ ರೈಲ್ವೇ ಗೇಟ್ ಸಂಖ್ಯೆ 68ಗೆ ರಸ್ತೆ ಮೇಲ್ಸೆತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು ಮಂಜೂರಾತಿ ನೀಡಿದ್ದು, ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರೈಲ್ವೇ ಗೇಟ್ ಸಂಖ್ಯೆ 68ಗೆ ರಸ್ತೆ ಮೇಲ್ಸೆತುವೆ ನಿರ್ಮಾಣ ಮಾಡುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಸಂಸದರ ಮನವಿಗೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರು ಹೆಚ್ಚಿನ ಆಸಕ್ತಿ ವಹಿಸಿ ರಸ್ತೆ ಮೇಲ್ಸೆತುವೆ ನಿರ್ಮಾಣ ಕಾಮಗಾರಿಗೆ ರೂ. 35 ಕೋಟಿ ಅನುದಾನ ನೀಡಿರುತ್ತಾರೆ.
ಈ ಸೇತುವೆಯಿಂದಾಗಿ ಮೆಡಿಕಲ್ ಕಾಲೇಜು ಮತ್ತು ಜಿಲ್ಲಾಸ್ಪತ್ರೆಯ ಸಂಪರ್ಕಕ್ಕೆ ಸುಲಭವಾಗಲಿದೆ. ಅಲ್ಲದೇ ರಾಯಚೂರು, ಗಂಗಾವತಿ ಹಾಗೂ ಈ ರಸ್ತೆ ಮಾರ್ಗದ ಎಲ್ಲ ಗ್ರಾಮಗಳ ಸಾರ್ವಜನಿಕರಿಗೆ ಮತ್ತು ಎಲ್ಲ ಬಗೆಯ ವಾಹನ ಸಂಚಾರಕ್ಕೆ ತುಂಬಾ ಅನುಕೂಲವಾಗಲಿದ್ದು, ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ, ಕೇಂದ್ರ ಸಚಿವರಾದ ನಿತೀನ್ ಗಡ್ಕರಿ ಹಾಗೂ ರಾಜ್ಯದ ಲೋಕೋಪಯೋಗಿ ಮಾಜಿ ಸಚಿವರಾದ ಸಿಸಿ ಪಾಟೀಲ್ ಅವರಿಗೆ ಸಂಸದರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕೊಪ್ಪಳ ಲೋಕಸಭಾ ಸದಸ್ಯರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Comments are closed.