ಜ.11 ರಂದು ಕೊಪ್ಪಳ ನಗರಸಭೆ ಬಜೆಟ್ ಪೂರ್ವಭಾವಿ ಸಭೆ
: ಕೊಪ್ಪಳ ನಗರಸಭೆಯ 2024-2025ನೇ ಸಾಲಿನ ಆಯವ್ಯಯ (ಬಜೆಟ್) ಪೂರ್ವಭಾವಿ ಸಭೆಯನ್ನು ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ವಹಿಸಿಕೊಳ್ಳುವರು. ಆಯವ್ಯಯ ಕುರಿತಾಗಿ ನಗರಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ನಗರದ ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ತೆಗೆದುಕೊಳ್ಳಬೇಕಾಗದ ಮುಂಜಾಗ್ರತಾ ಕ್ರಮಗಳಿಗೆ ಸಂಬAಧಪಟ್ಟAತೆ ಕೊಪ್ಪಳ ನಗರದ ನೋಂದಾಯಿತ ರೆಸಿಡೆಂಟ್ ವೆಲ್‌ಫೇರ್ ಅಸೋಸಿಯೇಷನ್ಸ್, ನೋಂದಾಯಿತ ಸರ್ಕಾರೇತರ ಸಂಘಟನೆಗಳು, ವ್ಯಾಪಾರ ಮತ್ತು ವಾಣಿಜ್ಯ ಸಂಘಗಳು ಮತ್ತು ನಗರದ ಮುಖಂಡರು ಹಾಗೂ ಸಾರ್ವಜನಿಕರ ಅಮೂಲ್ಯ ಸಲಹೆ ಸೂಚನೆಗಳ ಅವಶ್ಯಕತೆ ಇದ್ದು, ಜ.11 ರಂದು ಜರುಗಲಿರುವ ಪೂರ್ವಭಾವಿ ಸಭೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
Comments are closed.