ಗವಿಸಿದ್ದೇಶ್ವರ ಜಾತ್ರಾ ಮಹತ್ಸೋವ: ಕಾಯಕ ದೇವೋಭವ ಹಾಗೂ ವಿವಿಧ ಕಾರ್ಯಕ್ರಮಗಳ ಆಯೋಜನೆ

Get real time updates directly on you device, subscribe now.

: 2024 ರ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ಗವಿಮಠದ ವಿಭಿನ್ನ ಸಾಮಾಜಿಕ ಕಳಕಳಿಯ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಭಾಗಿತ್ವದಲ್ಲಿ ಸಾಮಾಜಿಕ ಧ್ಯೇಯ ವಿಷಯವಾಗಿ ಕಾಯಕ ದೇವೋಭವ ಎಂಬ ಶೀರ್ಷಿಕೆಯ ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು, ಸಂತೋಷದ ಬದುಕು ಎಂಬ ಘೋಷವಾಕ್ಯದೊಂದಿಗೆ ಸ್ವಯಂ ಉದ್ಯೋಗ ಹಾಗೂ ವೃತ್ತಿ ಕೌಶಲ್ಯದ ಅರಿವು ಮತ್ತು ಮಹತ್ವ ತಿಳಿಸುವ ಹಾಗೂ ಜನರಿಗೆ ಪ್ರೇರೇಪಿಸುವ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು ವಿಷಯವಾಗಿ ಭಾಷಣ ಸ್ಪರ್ಧೆಯನ್ನು ಜನವರಿ 10 ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಖಾಸಗಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕೇಂದ್ರಗಳಲ್ಲಿ ಆಯೋಜಿಸಬೇಕು. ನಂತರ ಆಯ್ಕೆಯಾದ ವಿದ್ಯಾರ್ಥಿಗಳನ್ನು ಜನವರಿ 13 ರಂದು ಬೆಳಿಗ್ಗೆ 10.30 ಗಂಟೆಗೆ ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಗೆ ಒಬ್ಬ ಶಿಕ್ಷಕ/ಶಿಕ್ಷಕಿಯರೊಂದಿಗೆ ಕಳುಹಿಸಿಕೊಡಬೇಕು.  ಈ ಕುರಿತಂತೆ ಡಿಡಿಪಿಐ, ಡಿಡಿಪಿಯು, ಕೊಪ್ಪಳ ವಿವಿ ಅಗತ್ಯ ಕ್ರಮ ಹಾಗೂ ಮೇಲುಸ್ತುವಾರಿಯನ್ನು ವಹಿಸಿಕೊಳ್ಳಬೇಕು.
ಕಾಯಕ ದೇವೋಭವ ಜಾಗೃತಿ ಅಭಿಯಾನವನ್ನು ನಡಿಗೆಯ ಜಾಥಾ ಮೂಲಕ ಜಿಲ್ಲೆಯ ಎಲ್ಲಾ ಹಳ್ಳಿ/ನಗರ ಪ್ರದೇಶಗಳಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳು, ಸ್ವ-ಸಹಾಯ ಸಂಘಗಳು, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಪಾಲಕರು ಮುಂತಾದವರನ್ನು ಸೇರಿಸಿಕೊಂಡು ಜಿಲ್ಲೆ ಹಾಗೂ ತಾಲ್ಲೂಕುಗಳ ಎಲ್ಲ ಇಲಾಖೆಗಳ ಅಧಿಕಾರಿಗಳು ನಿಮ್ಮ ಕಾರ್ಯವ್ಯಾಪ್ತಿಯಲ್ಲಿ ಜಾಗೃತಿ ನಡಿಗೆಯನ್ನು ಆಯೋಜಿಸಬೇಕು.
ಜನವರಿ 24 ರ ಬುಧವಾರ ಬೆಳಿಗ್ಗೆ 08 ಗಂಟೆಗೆ ಕಾಯಕ ದೇವೋಭವ ಜಾಗೃತಿ ಅಭಿಯಾನವನ್ನು ನಡಿಗೆಯ ಜಾಥಾ ಮೂಲಕ ನಗರದಲ್ಲಿ ಹಮ್ಮಿಕೊಳ್ಳಬೇಕು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನ(ತಾಲ್ಲೂಕು ಕ್ರೀಡಾಂಗಣ) ದಿಂದ ಆರಂಭವಾಗಿ ಅಶೋಕ ವೃತ್ತ, ಗಡಿಯಾರ ಕಂಬದ ಮೂಲಕ ಶ್ರೀ ಗವಿಮಠ ತಲುಪುವ ನಡಿಗೆ ಜಾಥಾಕ್ಕೆ ಕೊಪ್ಪಳ ನಗರದ ಎಲ್ಲ ಸರಕಾರಿ, ಅನುದಾನಿತ, ಖಾಸಗಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕೇಂದ್ರಗಳು ಮತ್ತು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗುವಂತೆ ಸಂಬAಧಿಸಿದ ಶಾಲಾ, ಕಾಲೇಜು ಮುಖ್ಯಸ್ಥರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿಡಿಪಿಐ, ಡಿಡಿಪಿಯು ಹಾಗೂ ಕೊಪ್ಪಳ ವಿವಿ ಕುಲಪತಿಗಳು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: