ಕೊಪ್ಪಳದಿಂದ ಅಯೋಧ್ಯೆಗೆ ರೈಲು ಸಂಚಾರಕ್ಕೆ ಮನವಿ

Get real time updates directly on you device, subscribe now.

ಅಯೋಧ್ಯೆಗೆ ರೈಲು ಸಂಚಾರಿಸಲು ಕೇಂದ್ರ ಸಚಿವ ಜೋಷಿಗೆ ಮನವಿ ಸಲ್ಲಿಕೆ

ಕೊಪ್ಪಳ: ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಕಣ್ತುಂಬಿಕೊಳ್ಳಲು ಕೊಪ್ಪಳ ಲೋಕಸಭೆ ಕ್ಷೇತ್ರದಿಂದ ವಿಶೇಷ ರೈಲು ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಸಂಸದ ಸಂಗಣ್ಣ ಕರಡಿ ಮನವಿ ಮಾಡಿದರು.
ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಸಂಸದ ಸಂಗಣ್ಣ ಕರಡಿ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಐದು ಶತನಮಾನಗಳಿಂದ ಕಾತುರದಿಂದ ಕಾಯುತ್ತಿದ್ದ ಶ್ರೀರಾಮ ಮಂದಿರ ಉದ್ಘಾಟನೆ ಜ.22 ರಂದು ಜರುಗಲಿದೆ. ಆದ್ದರಿಂದ ಶ್ರೀರಾಮನ ಬಂಟ ಹನುಮ ಜನ್ಮ ಸ್ಥಳ ಅಂಜನಾದ್ರಿ ಭಾಗದ ಜನತೆ ಶ್ರೀರಾಮ ಮಂದಿರ ಉದ್ಘಾಟನೆ ಗೆ ಹೋಗಲು ಬಯಸಿದ್ದು, ಕೇಂದ್ರ ಸರ್ಕಾರದಿಂದ ವಿಶೇಷ ರೈಲು ಸಂಚಾರಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.
ಶತಮಾನಗಳ ಕನಸನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ನನಸು ಮಾಡಿದೆ. ಅಯೋಧ್ಯೆಯ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಇದೇ ಮಾದರಿಯಲ್ಲಿ ಹನುಮ ಹುಟ್ಟಿದ ನಾಡು ಅಂಜನಾದ್ರಿ ಅಭಿವೃದ್ಧಿ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಎಂದರು.
ಗಂಗಾವತಿಯಿಂದ ಅಯೋಧ್ಯೆಗೆ ರೈಲು ಸಂಚಾರ ನಡೆಸಲು ಅವಕಾಶ ಕಲ್ಪಿಸಲು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಶೀಘ್ರವೇ ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಿಗುವ ಭರವಸೆ ಇದೆ‌ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ, ಕೊಪ್ಪಳ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಎಚ್.ಎಂ.ಸಿದ್ದರಾಮಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಗ್ ರಾವ್ ಕುಲಕರ್ಣಿ ಸೇರಿ ಮತ್ತಿತರರಿದ್ದರು.

–ಕೋಟ್–
ರಾಜ್ಯದಲ್ಲಿಲ್ಲ ಹಿಂದುಗಳ ರಕ್ಷಣೆ:
ಕರ ಸೇವಕರ ಬಂಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಆಡಳಿತ ಮಾಡುತ್ತಿದೆ. ರಾಜ್ಯದಲ್ಲಿ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.

  • ಸಂಸಣ್ಣ ಕರಡಿ, ಸಂಸದರು.

Get real time updates directly on you device, subscribe now.

Comments are closed.

error: Content is protected !!