ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

Get real time updates directly on you device, subscribe now.

ಕೊಪ್ಪಳ : ಸರ್ಕಾರದಿಂದ ಬಿಡುಗಡೆಯಾದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ನಿಗದಿತ ಕಾಲವಧಿಯಲ್ಲಿ ಸಮರ್ಪಕವಾಗಿ ಬಳಸಿ, ಯಾವುದೇ ಕಾರಣಕ್ಕೂ ಅನಗತ್ಯವಾಗಿ ಅನುದಾನ ಮರಳಿ ಹೋಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಶನಿವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ 2023-24ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಬುಡಕಟ್ಟು ಉಪಯೋಜನೆ ಅಧಿನಿಯಮ-2013 ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ/ಬುಡಕಟ್ಟು ಉಪಯೋಜನೆಗಳ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಬುಡಕಟ್ಟು ಉಪಯೋಜನೆ ಅಧಿನಿಯಮ-2013 ರನ್ವಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿ ಮಾಡಿ, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಅಗತ್ಯವಿರುವಷ್ಟು ಅನುದಾನವನ್ನು ಸಹ ಬಿಡುಗಡೆ ಮಾಡುತ್ತದೆ. ತಳ ಸಮುದಾಯದ ಅಭಿವೃದ್ಧಿ ಯೋಜನೆಯ ಮೂಲ ಧ್ಯೇಯವಾಗಿದೆ. ಆದ್ದರಿಂದ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ. ಬಿಡುಗಡೆಯಾದ ಅನುದಾನವನ್ನು ಅರ್ಹ ಫಲಾನುಭವಿಗಳು, ಯೋಜನೆಗಳ ಜಾರಿಗೆ ಬಳಸಿ. ನಿಗದಿಪಡಿಸಿದ ಕಾಲವಧಿಯನ್ನು ಮೀರದಂತೆ ಕಾರ್ಯನಿರ್ವಹಿಸಿ. ಯೋಜನೆ ಅನುಷ್ಠಾನದಲ್ಲಿ ವಿಳಂಬವಾದAತೆ ಅನುದಾನ ಮರಳಿ ಸರ್ಕಾರಕ್ಕೆ ಹೋಗುತ್ತದೆ. ಇದರಿಂದ ಸಮಯ ಹಾಗೂ ಶ್ರಮ ಎಲ್ಲವೂ ವ್ಯರ್ಥವಾಗುತ್ತದೆ. ಆದ್ದರಿಂದ ನಿಗದಿತ ಕಾಲವಧಿಯಲ್ಲಿ ಅರ್ಹ ಫಲಾನುಭವಿಗೆ ಯೋಜನೆ ಲಾಭ ತಲುಪಿಸಿ, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಿ ಎಂದು ಅವರು ಹೇಳಿದರು.
ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಬಾಕಿ ಉಳಿದಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶೀಘ್ರವೇ ಮುಕ್ತಾಯಗೊಳಿಸಿ. ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಮೀಸಲಿಟ್ಟು, ಅಭಿವೃದ್ಧಿಗೆ ಕ್ರಮ ಕೈಗೊಳ್ಳಿ. ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಾಲೋನಿಗಳಿಗೆ ಒದಗಿಸಿ. ಫಲಾನುಭವಿ ಆಧಾರಿತ ಯೋಜನೆಗಳಲ್ಲಿ ಅರ್ಹ ಫಲಾನುಭವಿಗೆ ಯೋಜನೆ ತಲುಪಬೇಕು. ಫಲಾನುಭವಿ ಗುರುತಿಸುವಿಕೆ, ಆಯ್ಕೆಯಲ್ಲಿ ಎಚ್ಚರ ವಹಿಸಿ. ಬೇಡಿಕೆಯನುಸಾರ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಸಂಬAಧಿಸಿದ ಇಲಾಖಾ ಮುಖ್ಯಸ್ಥರಿಗೆ ಪ್ರಸ್ತಾವನೆ ಸಲ್ಲಿಸಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಕೊಪ್ಪಳ ನಗರಸಭೆ ಪೌರಾಯುಕ್ತ ಗಣಪತಿ, ಕುಷ್ಟಗಿ ತಹಶೀಲ್ದಾರ ಶೃತಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!