ಶ್ರೀ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ
ಅರ್ಥಪೂರ್ಣ ಜಯಂತಿ ಆಚರಣೆಗೆ ಕ್ರಮ ವಹಿಸಿ : ಎಸಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ

Get real time updates directly on you device, subscribe now.

ಕೊಪ್ಪಳ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಜನವರಿ 21 ರಂದು ಆಚರಿಸಲಾಗುವ ಶ್ರೀ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಹೇಳಿದರು.
ಶನಿವಾರದಂದು ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ನಿಗದಿಪಡಿಸಿದಂತೆ ಜನವರಿ 21 ರಂದು ಜಿಲ್ಲಾ ಕೇಂದ್ರದಲ್ಲಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲ್ಲೂಕಾ ಕಚೇರಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಜಯಂತಿ ಆಚರಣೆ ಮಾಡಲಾಗುತ್ತದೆ. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದ ಬಂಧುಗಳು ಅನುಕೂಲ ಮಾಡಿಕೊಡಬೇಕು. ಹಾಗೆಯೇ ಜಯಂತಿ ಆಚರಣೆಗೆ ಸಂಬAಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ಜ.21 ರಂದು ಬೆಳಿಗ್ಗೆ 08.30 ಗಂಟೆಗೆ ನಗರದ ಸಿರಸಪ್ಪಯ್ಯನಮಠದಿಂದ ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ಅಂಬಿಗರ ಚೌಡಯ್ಯನವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸುತ್ತವೆ. ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಕಲ್ಪಿಸಬೇಕು. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಶೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬAಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಸುಗಮ ಸಂಗೀತಕ್ಕೆ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಸಮಾಜದ ಬೇಡಿಕೆ ಹಾಗೂ ಅವರ ಸಲಹೆಯಂತೆ ಅವರು ಸೂಚಿಸಿದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವ ಕಾರಣ ಯಾವುದೇ ರೀತಿಯ ಅನನುಕೂಲವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಮಾಜದ ಜಿಲ್ಲಾಧ್ಯಕ್ಷರಾದ ಸೋಮಣ್ಣ ಬಾರಕೇರ, ತಾಲ್ಲೂಕಾಧ್ಯಕ್ಷರಾದ ಹುಲಗಪ್ಪ ಬಾರಕೇರ, ತಾಲ್ಲೂಕು ಕಾರ್ಯದರ್ಶಿ ರಾಜಾ ಕಲೆಗಾರ, ಸಮಾಜದ ಮುಖಂಡರಾದ ಮಾರ್ಕಂಡೆಪ್ಪ ಪೂಜಾರ, ಕೃಷ್ಣಪ್ಪ ಕಬ್ಬೇರ, ಯಮನಪ್ಪ ಕಬ್ಬೇರ, ಗಂಗಾಧರ ಸೇರಿದಂತೆ ಸಮಾಜದ ಪ್ರಮುಖರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: