ಕೊಪ್ಪಳ ಲೋಕಸಭಾ ವ್ಯಾಪ್ತಿಯ ರೈಲ್ವೆ ಯೋಜನೆ ಬಗ್ಗೆ ಸಂಸದ ಸಂಗಣ್ಣ ಚರ್ಚೆ 

Get real time updates directly on you device, subscribe now.

ಕೊಪ್ಪಳ: ಲೋಕಸಭಾ ವ್ಯಾಪ್ತಿಯ ರೈಲ್ವೆ ಅಭಿವೃದ್ಧಿ ಕಾಮಗಾರಿಗಳು, ಲೋಕಾರ್ಪಣೆ ಸಂಬಂಧಿಸಿ ಹಲವು ವಿಷಯಗಳ ಕುರಿತು ಮಂಗಳವಾರ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಜೊತೆ ಸಂಸದ ಸಂಗಣ್ಣ ಕರಡಿ ಚರ್ಚಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.22 ರಂದು ಮರ್ಯಾದ ಪುರುಷ ಶ್ರೀರಾಮನ ಮಂದಿರ ಲೋಕಾರ್ಪಣೆಯಾಗಲಿದು, ರಾಮನ ಬಂಟ ಹನುಮನ ಜನ್ಮಭೂಮಿ ಅಂಜನಾದ್ರಿ ಬಳಿಯ ಗಂಗಾವತಿ ಯಿಂದ ಅಯೋಧ್ಯೆಗೆ ವಿಶೇಷ ರೈಲು ಬಿಡಲು ಒತ್ತಡ ತರಲಾಗಿದೆ‌. ರೈಲ್ವೆ ಅಧಿಕಾರಿಗಳು ತಾಂತ್ರಿಕವಾಗಿ ಪರಿಶೀಲಿಸುತ್ತಿದ್ದಾರೆ. ವಾರದೊಳಗೆ ಮತ್ತೊಂದು ಸಭೆ ಇದ್ದು, ನಿರ್ಧಾರವಾಗಲಿದೆ. ಗಂಗಾವತಿ- ಅಯೋಧ್ಯೆಗೆ ವಿಶೇಷ ರೈಲು ಬಿಡಲು ವಿಶ್ವಾಸವಿದೆ ಎಂದರು.
ಗದಗ- ವಾಡಿ ರೈಲು ಮಾರ್ಗ ಲೋಕಾರ್ಪಣೆ ಮಾಡಿ ಕುಷ್ಟಗಿ ವರೆಗೆ ರೈಲು ಓಡಿಸುವುದು, ಗಿಣಿಗೇರಾ-ರಾಯಚೂರು ರೈಲು ಮಾರ್ಗದ ಕಾರಟಗಿ ಯಿಂದ ಸಿಂಧನೂರು ವರೆಗೆ ರೈಲು ಓಡಿಸುವುದು ಬಗ್ಗೆ ಚರ್ಚಿಸಲಾಗಿದೆ. ತಿಂಗಳೊಳಗೆ ಚಾಲನೆ ನೀಡುವ ಭರವಸೆ ನೀಡಿದ್ದಾರೆ ಎಂದರು.
ಹುಲಿಗೆ ಮುನಿರಾಬಾದ ಮೇಲ್ಸೇತುವೆ ಭೂಮಿ ಪೂಜೆ ಅಡಿಗಲ್ಲು ಸಮಾರಂಭವನ್ನು ಶೀಘ್ರದಲ್ಲೇ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಲಾಗಿದೆ. ಗಿಣಿಗೇರಾ ಮೇಲ್ಸೇತುವೆ ಶೇ. 90 ರಷ್ಟು ಪೂರ್ಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆ ಮಾಡಲಾಗುವುದು. ಇನ್ನು ಕೊಪ್ಪಳ ನಗರದ ರೈಲ್ವೆ ಗೇಟ್ ನಂ – 63 ( ಸ್ವಾಮಿ ವಿವೇಕಾನಂದ ಸ್ಕೂಲ್ ಹತ್ತಿರ) ಹಾಗೂ – 65 (ಕೆಇಬಿ ಗೇಟ್) ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡುವ ಬಗ್ಗೆ ಚರ್ಚಿಸಲಾಗಿದ್ದು, ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಮಾಜಿ ಅಧ್ಯಕ್ಷ ಅನಿಲ್ ಸಹಸ್ರಬುದ್ದಿ, ಸಂತೋಷ್ ಕಲೋಜಿ, ನರಸಿಂಗರಾವ್ ಕುಲಕರ್ಣಿ, ಸಿದ್ದರಾಮ ಸ್ವಾಮಿ, ವಿರುಪಾಕ್ಷಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!