ಅಪೌಷ್ಠಿಕತೆಯಿಂದ ಮಕ್ಕಳು ಮರಣವಾಗುವುದನ್ನು ತಡೆಗಟ್ಟಿ: ಡಾ.ಪ್ರಕಾಶ
: ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಚೈನ್ ಮಕ್ಕಳ ಸುಧಾರಿತ ಪೌಷ್ಟಿಕತೆಗಾಗಿ ಆರೋಗ್ಯ ಪ್ರಕ್ರಿಯೆ ತರಬೇತಿ ಕಾರ್ಯಕ್ರಮವು ಜನವರಿ 9ರಂದು ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರಿಂದ ರಾಷ್ಟಿçÃಯ ಪೌಷ್ಠಿಕ ಆರೋಗ್ಯ ಕಾರ್ಯಕ್ರಮದಡಿ ಕುಷ್ಟಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ್ ವಿ ಅವರು ಮಾತನಾಡಿ, ಐದು ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಅಪೌಷ್ಟಿಕತೆಯನ್ನು ಗುರುತಿಸಿ ಅವರಿಗೆ ಚಿಕಿತ್ಸೆ ನೀಡಿ ಮಕ್ಕಳ ಮರಣ ತಡೆಗಟ್ಟುವುದು ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ಭಾರತವು ಹಳ್ಳಿಗಳ ದೇಶವಾಗಿದೆ. ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ದೇಶ ಅಭಿವೃದ್ಧಿಯಾದಂತೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಮುದಾಯ ಆರೋಗ್ಯ ಅಧಿಕಾರಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಅಪೌಷ್ಟಿಕ ಮಕ್ಕಳು ಕಂಡುಬAದರೆ ಅವರನ್ನು ಮೇಲ್ಮಟ್ಟದ ಎನ್‌ಆರ್‌ಸಿ ಕೇಂದ್ರಗಳಿಗೆ ನಿರ್ದೇಶನ ಮಾಡಿ ಚಿಕಿತ್ಸೆ ಕೊಡಿಸುವಂತೆ ಗ್ರಾಮಮಟ್ಟದಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.
ಈ ತರಬೇತಿಯಲ್ಲಿ ಡಾ.ಆನಂದ್ ಗೋಟುರು ಅವರು ಎನ್‌ಎಫ್‌ಎಚ್‌ಎಸ್ 5 ಮತ್ತು 4 ಸಮೀಕ್ಷೆ ಕುರಿತು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀ ಶಿವಾನಂದ ಅವರು ಪಿಪಿಟಿ ಮೂಲಕ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶರಣಮ್ಮ ಮಾಲಿಪಾಟೀಲ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸೋಮಶೇಖರ್ ಮೇಟಿ, ಶರಣಪ್ಪ ವೆಂಕಟೇಶ್ ಹಾಗೂ ತಾಲೂಕಿನ ಎಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸಮುದಾಯ ಆರೋಗ್ಯ ಅಧಿಕಾರಿಗಳು ಇದ್ದರು.

Comments are closed.