ಯುವನಿಧಿ: ಫಲಾನುಭವಿಗಳಿಗೆ ಸೂಚನೆ
ಯುವನಿಧಿ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳು ಯೋಜನೆಯಡಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್ ಅವರು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಡಿ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಯುವನಿಧಿ ಯೋಜನೆ ಅನುಷ್ಠಾನವಾಗಿದ್ದು, ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳಿಗೆ ಪದವೀಧರಿಗೆ ರೂ.3000 ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1500 ರಂತೆ ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳಿಗೆ ನೀಡಲಾಗುತ್ತದೆ. ಜನವರಿ 12ರಂದು ಸ್ವಾಮಿ ವಿವೇಕಾನಂದ ಜಯಂತಿ ದಿನದಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ನೇರವೇರಲಿದೆ. ಈ ಯೋಜನೆಯಡಿ ನೋಂದಾಯಿತ ಫಲಾನುಭವಿಗಳು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶ್ವಿಸಿಗೊಳಿಸಬೇಕು.
ನೋಂದಣಿ ಮಾಡದೇ ಇರುವ ಫಲಾನುಭವಿಗಳು ನೋಂದಣಿ ಮಾಡಲು ಸೇವಾ ಸಿಂದು ಪೋರ್ಟಲ್ https://sevasindhugs. karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಅಥವಾ ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸ್ವಯಂ ಘೋಷಿತ ನಿರುದ್ಯೋಗ ಪ್ರಮಾಣ ಪತ್ರ ದೃಢಿಕರಣ ಕಡ್ಡಾಯವಾಗಿರುತ್ತದೆ.
ಅರ್ಜಿಸಲ್ಲಿಸಲು ಫಲಾನುಭವಿಗಳು 2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಉರ್ತ್ತಿಣಾಗಿರಬೇಕು. ಕರ್ನಾಟಕದಲ್ಲಿ ಕನಿಷ್ಠ 6 ತಿಂಗಳು ವಾಸವಿರಬೇಕು. ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರು. ಸ್ವಯಂ ಉದ್ಯೋಗ ಹೊಂದಿಲ್ಲದವರು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರಗಳೊಂದಿಗೆ ನೋಂದಾಯಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 18005999918 ಗೆ ಸಂರ್ಪಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನೋಂದಣಿ ಮಾಡದೇ ಇರುವ ಫಲಾನುಭವಿಗಳು ನೋಂದಣಿ ಮಾಡಲು ಸೇವಾ ಸಿಂದು ಪೋರ್ಟಲ್ https://sevasindhugs.
ಅರ್ಜಿಸಲ್ಲಿಸಲು ಫಲಾನುಭವಿಗಳು 2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಉರ್ತ್ತಿಣಾಗಿರಬೇಕು. ಕರ್ನಾಟಕದಲ್ಲಿ ಕನಿಷ್ಠ 6 ತಿಂಗಳು ವಾಸವಿರಬೇಕು. ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರು. ಸ್ವಯಂ ಉದ್ಯೋಗ ಹೊಂದಿಲ್ಲದವರು. ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರಗಳೊಂದಿಗೆ ನೋಂದಾಯಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 18005999918 ಗೆ ಸಂರ್ಪಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Comments are closed.