*
—-
ಕೊಪ್ಪಳ ): ರಾಯಚೂರು ನಗರದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ತುಂಗಭದ್ರಾ ಜಲಾಶಯದಿಂದ ಮೈಲು 104ರ ರಾಯಚೂರು ಜಿಲ್ಲೆ ಗಣೇಕಲ್ ಜಲಾಶಯಕ್ಕೆ (ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ 0 ರಿಂದ 104 ಮೈಲ್) ಜೂನ್ 16ರಿಂದ ಜೂನ್ 23ರವರೆಗೆ ನೀರಿನ್ನು ಹರಿಸಲು ನಿರ್ಧಾರಿಸಲಾಗಿದೆ ಎಂದು ಕನೀನಿನಿ, ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯದಲ್ಲಿ 2023-24ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ನೀರು ಹರಿಸಲಾಗುತ್ತಿದ್ದು, ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‌ಗಳನ್ನು ಬಂದು ಮಾಡಿ ನಿಗದಿತ ಪ್ರಮಾಣದ ನೀರನ್ನು ಹರಿಸಿ ಗಣೇಕಲ್ ಜಲಾಶಯವನ್ನು ತುಂಬಿಸಿ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಲಾಗಿದೆ.
*ರೈತ ಭಾಂದವರಲ್ಲಿ ಮನವಿ:* ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿರುತ್ತದೆ. ಕಾರಣ ಎಲ್ಲಾ ಜನಸಾಮಾನ್ಯರಿಗೂ ಹಾಗೂ ರೈತ ಭಾಂದವರು ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
Comments are closed.