ನಾಗೇಂದ್ರಪ್ಪಗೆ ಗೌರವ ಡಾಕ್ಟರೇಟ್
ಕೊಪ್ಪಳ: ಅಳವಂಡಿ ಸರ್ಕಾರಿ ಪ್ತಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ನಾಗೇಂದ್ರಪ್ಪ ಬಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ “ಸಾಮುದಾಯಿಕ ಸಾರ್ವಜನಿಕ ಸ್ವತ್ತು ಮತ್ತು ಅಭಿವೃದ್ಧಿ” ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.
ಇದೇ ಜನವರಿ 10 ರಂದು ನಡೆದ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳು ನಾಗೇಂದ್ರಪ್ಪ ಅವರಿಗೆ ಪದವಿ ಪ್ರದಾನ ಮಾಡಿದ್ದಾರೆ. ನಾಗೇಂದ್ರಪ್ಪ ಬಿ ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ,ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
Comments are closed.