ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ
ಬೇವೂರು ಗ್ರಾಮಕ್ಕೆ ವೀಕ್ಷಕರಾದ ಕೆ.ಪಿ.ಮೋಹನ್ ರಾಜ್ ಭೇಟಿ
ಕೊಪ್ಪಳ : ಮತದಾರರ ಪಟ್ಟಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವೀಕ್ಷಕರು ಆಗಿರುವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನ್ ರಾಜ್ ಅವರು ಜನವರಿ ೧೨ರಂದು ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಬೇವೂರು ಗ್ರಾಮಕ್ಕೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ ನಡೆಸಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪರಿಶೀಲನೆ ವೇಳೆಯಲ್ಲಿ ಬೇವೂರು ಗ್ರಾಮದ ಹೋಟೆಲ್ ಒಂದರಲ್ಲಿ ಮಿರ್ಚಿ, ಖಾರಾ ಮಂಡಾಳ ರುಚಿ ಸವೆದು ಚಾ ಕುಡಿದು ಸರಳತೆ ಮೆರೆದರು. ಈ ಸಂದರ್ಭದಲ್ಲಿ ಯಲಬುರ್ಗಾ ತಹಸೀಲ್ದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Comments are closed.