ಸಮಾಜ ಕಲ್ಯಾಣ ಇಲಾಖೆ: ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ
ಕೊಪ್ಪಳ : ಸಮಾಜ ಕಲ್ಯಾಣ ಇಲಾಖೆಯಿಂದ 2023ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಹಾಗೂ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 31ರ ವರೆಗೆ ಅವಕಾಶವಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವೆಬ್‌ಸೈಟ್ www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್‌ನ ಯಾವುದೇ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಗಂಗಾವತಿ ಹಾಗೂ ಕುಷ್ಟಗಿ, ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.