ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾಗತ ಸಮಾರಂಭ

Get real time updates directly on you device, subscribe now.

ಕೊಪ್ಪಳ: ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ೧೯.೦೧.೨೦೨೪ ರಂದು ಬೆಳಿಗ್ಗೆ ೧೦.೦೦ ಗಂಟೆಗೆ ೨೦೨೩- ೨೪ನೇ ಸಾಲಿನ ಸಾಂಸ್ಕೃತಿಕ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್, ಎನ್.ಎಸ್.ಎಸ್, ಕ್ರೀಡೆ, ರೆಡ್‌ಕ್ರಾಸ್, ಪ್ಲೇಸ್‌ಮೆಂಟ್ ಸೆಲ್, ಐಕ್ಯೂ ಎಸಿ ಮತ್ತು ಇತರ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಬಿ.ಎ, ಬಿ.ಕಾಂ, ಬಿಎಸ್.ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ರಾಘವೇಂದ್ರ ಹಿಟ್ನಾಳ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯರಾದ ಡಾ. ಗಣಪತಿ ಕೆ.ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಹನುಮಂತಪ್ಪ ಅಂಡಗಿ ಚಿಲವಾಡಗಿ, ಶಿಕ್ಷಣ ಇಲಾಖೆಯ ನಿವೃತ್ತ ನೌಕರರಾದ ಅಮರೇಶ ಕಮ್ಮಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ನಿವೃತ್ತ ಪ್ರಾಚಾರ್ಯರಾದ ಬಿ.ಜಿ. ಕರಿಗಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಹಾವಿದ್ಯಾಲಯದ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಡಾ.ಹುಲಿಗೆಮ್ಮ ಬಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!