ಶಿಕ್ಷಕಿ ಶ್ರೀಮತಿ ಚಂದ್ರಮ್ಮ ಜವಳಿ ಇವರಿಗೆ ಪಿಹೆಚ್.ಡಿ ಪದವಿ

Get real time updates directly on you device, subscribe now.

New Doc 2021-09-04 17.07.17
ಗಂಗಾವತಿ: ತಾಲೂಕಿನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಚಂದ್ರಮ್ಮ ಜವಳಿ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ (ಪಿಹೆಚ್.ಡಿ) ಪದವಿ ನೀಡಿದೆ.
ಇವರು ಸಮಾಜ ವಿಜ್ಞಾನಗಳ ನಿಕಾಯದ ಜಾನಪದ ಅಧ್ಯಯನ ವಿಭಾಗದಲ್ಲಿ ದಾವಣಗೆರೆ ಜಿಲ್ಲೆಯ ಬಸವಾಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಬಸವರಾಜ ಎ.ಡಿ. ಇವರ ಮಾರ್ಗದರ್ಶನದಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಸಮುದಾಯದ ಸಹಭಾಗಿತ್ವ ಎಂಬ ವಿಷಯದಲ್ಲಿ ಸಂಶೋಧನೆ ಕೈಗೊಂಡು ಪಿಹೆಚ್.ಡಿ ಮಹಾಪ್ರಬಂಧವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ್ದು, ಇವರಿಗೆ ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ ೩೨ನೇ ಘಟಿಕೋತ್ಸವದ ನುಡಿಹಬ್ಬದಲ್ಲಿ ಡಾಕ್ಟರೇಟ್ ಪದವಿ ನೀಡಿದೆ.

Get real time updates directly on you device, subscribe now.

Comments are closed.

error: Content is protected !!