ಸಮಾನಾಂತರ ಜಲಾಶಯ ನಿರ್ಮಾಣ ವಿಚಾರ ಚರ್ಚಿಸುವೆ: ಶಿವರಾಜ ತಂಗಡಗಿ

Get real time updates directly on you device, subscribe now.

ವಿಜಯನಗರ ಕಾಲುವೆ ಒಳಗೊಂಡAತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಸೇರಿದಂತೆ ಬೆಳೆದು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್. ತಂಗಡಗಿ ಅವರು ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನವರಿ 19ರಂದು ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಲಾಶಯದ ನೀರಿನ ಸಾಮರ್ಥ್ಯ 10.151 ಟಿಎಂಸಿ ಇದ್ದು ಈ ಪೈಕಿ ರಾಜ್ಯದ ಪಾಲು 2.481 ಟಿಎಂಸಿ, ಆಂಧ್ರಪ್ರದೇಶದ ಪಾಲು 2.851 ಡಿಎಂಸಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರಿಸಿ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಹಂಚಿಕೆ ಮಾಡಲಾಗಿದೆ.
ತುಂಗಭದ್ರಾ ಎಡದಂಡೆ ಮುಖ್ಯಕಾಲುವೆಗೆ, ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಹಾಗೂ ರಾಯ ಬಸವಣ್ಣ ಕಾಲುವೆಗೆ ನೀರು ಒದಗಿಸಲು ಕಾಲಾವಧಿ ನಿಗದಿಪಡಿಸಲಾಗಿದೆ. ಉಳಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ನೀರಿಗೆ ಬೇಡಿಕೆ ಇಟ್ಟಂತೆ ಕುಡಿಯಲು ನೀರು ಹರಿಸಲಾಗುವುದು. ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವೇ ಇಲ್ಲ ಎಂಬುದನ್ನು ಹೇಳಲಾಗಿದೆ. ನಿಂತ ಬೆಳೆಗೆ ನೀರು ಬಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಹೂಳೇತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳೆತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಇದಕ್ಕೆ ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು. ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಎನ್.ಎಸ್.ಬೋಸ್‌ರಾಜ್, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಜಿ.ಜನಾರ್ಧನ ರೆಡ್ಡಿ ಹಾಗೂ ರೈತ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: