ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ
ಸಂವಿಧಾನ ದಿನಾಚರಣೆಯ ಪ್ರಯುಕ್ತ ಜನವರಿ 26 ರಿಂದ ಒಂದು ತಿಂಗಳ ಕಾಲ ನಡೆಯುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ಜಿಲ್ಲಾಮಟ್ಟ, ತಾಲೂಕುಮಟ್ಟ ಮತ್ತು ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಸರ್ಕಾರವು ನಿರ್ದೇಶನ ನೀಡಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಜನವರಿ 26 ರಿಂದ ಫೆಬ್ರವರಿ 25ರವರೆಗೆ ಕುಷ್ಟಗಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕರನ್ನು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಕೊಪ್ಪಳ ತಾಲೂಕಿನ ನೋಡಲ್ ಅಧಿಕಾರಿಗಳನ್ನಾಗಿ ಕೊಪ್ಪಳ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಕೊಪ್ಪಳ ಆರಕ್ಷಕ ನಿರೀಕ್ಷಕರನ್ನು ನಿಯೋಜಿಸಿದೆ.
ಕುಷ್ಟಗಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕುಷ್ಟಗಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಕುಷ್ಟಗಿ ಪೊಲೀಸ್ ವೃತ್ತ ನಿರೀಕ್ಷಕರನ್ನು ನೇಮಿಸಲಾಗಿದೆ.
ಯಲಬುರ್ಗಾ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಯಲಬುರ್ಗಾ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಯಲಬುರ್ಗಾ ಪೊಲೀಸ್ ವೃತ್ತ ನಿರೀಕ್ಷಕರನ್ನು ನೇಮಕ ಮಾಡಿದೆ.
ಗಂಗಾವತಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಗಂಗಾವತಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಗಂಗಾವತಿ ಪೊಲೀಸ್ ವೃತ್ತ ನಿರೀಕ್ಷಕರನ್ನು ನಿಯೋಜಿಸಿದೆ.
ಕುಕನೂರು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕುಕನೂರು ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಅಧೀಕ್ಷಕರು ಹಾಗೂ ಕುಕನೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇವರನ್ನು ನೇಮಿಸಿದೆ.
ಕನಕಗಿರಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕನಕಗಿರಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಕುಷ್ಟಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಕುಕನೂರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇವರನ್ನು ನಿಯೋಜನೆ ಮಾಡಿದೆ.
ಕಾರಟಗಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕಾರಟಗಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಕಾರಟಗಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇವರನ್ನು ನಿಯೋಜಿಸಿದೆ.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸ್ತಬ್ದಚಿತ್ರ ಮೆರವಣಿಗೆಗೆ ಎಲ್ಲ ಜಿಲ್ಲಾ ಕೇಂದ್ರಗಳ ಜನವರಿ 26ರಂದು ಏಕಕಾಲದಲ್ಲಿ ಚಾಲನೆ ನೀಡಲಾಗುವುದು. ಈ ಜಾಥಾವು ಪೂರ್ವಪ್ರತ್ಯಯ ಮಾರ್ಗನಕ್ಷೆಯಂತೆ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಜನವರಿ 26ರಿಂದ ಫೆಬ್ರವರಿ 25ರವರೆಗೆ ಸಂಚರಿಸುವAತೆ ಕ್ರಮ ಕೈಗೊಳ್ಳಲು ಸರ್ಕಾರವು ಆದೇಶದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಜನವರಿ 26ರಿಂದ ಫೆಬ್ರವರಿ 25ರವರಗೆ ನಡೆಯಲಿರುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಿಯೋಜಿಸಿದ ಎಲ್ಲ ನೋಡಲ್ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

Comments are closed.