ಕುಷ್ಟಗಿ ತಾಲೂಕು: 36 ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ

Get real time updates directly on you device, subscribe now.

ಕೊಪ್ಪಳ  : ಕುಷ್ಟಗಿ ತಾಲೂಕಿನ 36 ಗ್ರಾಮ ಪಂಚಾಯತಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಂಬಂಧ ಜೂನ್ 16ರಂದು ಕುಷ್ಟಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಿಟೋರಿಯಂ ಹಾಲ್‌ನಲ್ಲಿ ಆಯಾ ಗ್ರಾ.ಪಂ.ಗಳ ಸದಸ್ಯರ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಸಮ್ಮುಖದಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು.
*ಗ್ರಾ.ಪಂ.ವಾರು ವಿವಿರ:* ನಿಲೋಗಲ್ ಗ್ರಾಮ ಪಂಚಾಯತ್‌ಗೆ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಎ., ತುಗ್ಗಲಡೋಣಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ, ಹನುಮನಾಳ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಮಾಲಗಿತ್ತಿ ಅಧ್ಯಕ್ಷ ಸ್ಥಾನ ಕೆಟಗೇರಿ-ಬಿ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಜಾಗೀರಗುಡದೂರು ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಯರಗೇರಾ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಹನುಮಸಾಗರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಕಬ್ಬರಗಿ ಅಧ್ಯಕ್ಷ ಸ್ಥಾನ ಎಸ್ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಕಾಟಾಪೂರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಹೂಲಗೇರಾ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಅಡವಿಭಾವಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಚಳಗೇರಾ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಬೆನಕನಾಳ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಹಿರೇಗೊಣ್ಣಾಗರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಹಿರೇಬನ್ನಿಗೋಳ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಕೋರಡಕೇರಾ ಅಧ್ಯಕ್ಷ ಸ್ಥಾನ ಎಸ್.ಟಿ., ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಎ., ತಳುವಗೇರಾ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಬಿ ಮಹಿಳೆ, ಬಿಜಕಲ್ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಎ ಮಹಿಳೆ, ದೋಟಿಹಾಳ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಕ್ಯಾದಿಗುಪ್ಪ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಎ., ಮುದೇನೂರು ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಕಂದಕೂರು ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಹಿರೇಮನ್ನಾಪೂರ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಜುಮಲಾಪೂರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಕಿಲಾರಹಟ್ಟಿ ಅಧ್ಯಕ್ಷ ಸ್ಥಾನ ಎಸ್ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಮೇಣಿದಾಳ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಸಂಗನಾಳ ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಎ ಮಹಿಳೆ, ಹಿರೇನಂದಿಹಾಳ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ, ಅಂಟರಠಾಣ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಕೇಸೂರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ, ಲಿಂಗದಳ್ಳಿ ಅಧ್ಯಕ್ಷ ಸ್ಥಾನ ಕೆಟಗೇರಿ-ಎ., ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಗುಮಗೇರಾ ಅಧ್ಯಕ್ಷ ಸ್ಥಾನ ಕೆಟಗೇರಿ-ಎ., ಉಪಾಧ್ಯಕ್ಷ ಸ್ಥಾನ ಎಸ್ಸಿ, ಬಿಳೇಕಲ್ಲ ಅಧ್ಯಕ್ಷ ಸ್ಥಾನ ಕೆಟಗೇರಿ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ, ತುಮರೀಕೊಪ್ಪ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಹಾಬಲಕಟ್ಟಿ ಅಧ್ಯಕ್ಷ ಸ್ಥಾನ ಕೆಟಗೇರಿ-ಎ., ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಶಿರಗುಂಪಿ ಅಧ್ಯಕ್ಷ ಸ್ಥಾನ ಕೆಟಗೇರಿ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನವು ಎಸ್ಸಿ ಮಹಿಳೆಗೆ ಮೀಸಲಾತಿ ನಿಗದಿಪಡಿಸಲಾಯಿತು.
ಈ ಸಂದರ್ಭದಲ್ಲಿ ಕುಷ್ಟಗಿ ತಹಶೀಲ್ದಾರರಾದ ರಾಘವೇಂದ್ರ ರಾವ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿವಪ್ಪ ಸುಬೇದಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!