ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲ್ಲೂಕಿನ ಘಟ್ಟಿರಡ್ಡಿಹಾಳದ ರೇಷ್ಮಾ ಬೇಗಂ ಆಯ್ಕೆ

Get real time updates directly on you device, subscribe now.

 

 

ಕೊಪ್ಪಳ : ದೆಹಲಿಯಲ್ಲಿ ಇದೇ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಲು ಕೊಪ್ಪಳ ತಾಲ್ಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ಯೋಗಪಟು ಹಾಗೂ ಕೊಪ್ಪಳ ತಾಲ್ಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಯೋಗ ತರಬೇತಿದಾರರಾದ ರೇಷ್ಮಾ ಬೇಗಂ ವಡ್ಡಟ್ಟಿ ಆಯ್ಕೆಯಾಗಿದ್ದಾರೆ.

ಗಣರಾಜ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಯೋಗ ಪ್ರದರ್ಶನ ನೀಡಲಿದ್ದಾರೆ. ರಾಜ್ಯದಿಂದ ಒಟ್ಟು 18 ಜನ ಯೋಗ ತರಬೇತುದಾರರನ್ನು ರಾಜ್ಯ ಆಯುಷ್ ಇಲಾಖೆ ಆಯುಕ್ತರು ನಾಮನಿರ್ದೇಶನ ಮಾಡಿ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದಾರೆ.

ರೇಷ್ಮಾ ಬೇಗಂ ವಡ್ಡಟ್ಟಿ ಅವರು ಕೊಪ್ಪಳ ತಾಲ್ಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಆಸ್ಪತ್ರೆಯಲ್ಲಿ ಯೋಗ ಶಿಕ್ಷಕಿ ಹಾಗೂ ತರಬೇತಿದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಕೂಡ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡ ವಿಶ್ವ ವಿದ್ಯಾಲಯದಲ್ಲಿ ಯೋಗದಲ್ಲಿ ಉನ್ನತ ವ್ಯಾಸಂಗವನ್ನು ಪೂರ್ಣಗೊಳಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಯೋಗಾಭ್ಯಾಸದಲ್ಲಿ ತೊಡಗಿರುವ ಅವರು ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ಪಡೆದಿದ್ದಾರೆ.

ದೆಹಲಿಯಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ರೇಷ್ಮಾ ಬೇಗಂ ವಡ್ಡಟ್ಟಿ ಅವರಿಗೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ವೈ.ಜೆ.ಶಿರವಾರ, ವೈದ್ಯಾಧಿಕಾರಿ ಕವಿತಾ ಹ್ಯಾಟಿ ಹಾಗೂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಪಾಲಕರು, ಗ್ರಾಮಸ್ಥರು ಹಾಗೂ ಸ್ನೇಹಿತರು ಅಭಿನಂದಿಸಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!