ಕಲಕೇರಿಯಲ್ಲಿ ಭಾರತ ನಿರ್ಮಾಣ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ

Get real time updates directly on you device, subscribe now.

  ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕೊಪ್ಪಳ ತಾಲೂಕಿನ ಕಲಕೇರಿ ಗ್ರಾಮ ಪಂಚಾಯತಿಯಲ್ಲಿ ನಿರ್ಮಿಸಲಾದ `ಭಾರತ ನಿರ್ಮಾಣ ಸೇವಾ ಕೇಂದ್ರದ ಕಟ್ಟಡ’ದ ಉದ್ಘಾಟನೆಯನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಜನವರಿ 22ರಂದು ನೆರವೇರಿಸಿದರು.
ಇದೆ ವೇಳೆ ಮಾತನಾಡಿದ ಶಾಸಕರು, ಮಹಾತ್ಮಾ ಗಾಂಧಿ ನರೇಗಾ ಯೋಜನೆಯುವ ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸುತ್ತದೆ. ಅದೇ ರೀತಿಯಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗೋದಾಮು ನಿರ್ಮಾಣ, ಶಾಲಾ ಅಡುಗೆ ಕೋಠಡಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳಾದ ಚರಂಡಿ, ಸಿಡಿ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿಗಳನ್ನು ಅನುಷ್ಠಾನಿಸುವದಕ್ಕೆ ಈ ಯೋಜನೆಯು ಬಹಳಷ್ಟು ಉಪಯುಕ್ತವಾಗಿದೆ. ಗ್ರಾಮ ಪಂಚಾಯತಿಯಲ್ಲಿ ಬಾಪುಜಿ ಸೇವೆಗಳು-100 ಇರುವದರಿಂದ ಎಲ್ಲಾ ಗ್ರಾಮಸ್ಥರು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಕರೆ ನೀಡಿದರು.
ಗ್ರಾಮ ಪಂಚಾಯತಿಗೆ ವಿವಿಧ ಕಾಮಗಾರಿಗಳಿಗೆ ಶಾಸಕರ ಅನುದಾನವನ್ನು ನೀಡಲಾಗುತ್ತಿದ್ದು, ಕಾಮಗಾರಿ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ಸರಿಯಾಗಿ ಪರಿಶೀಲನೆ ಮಾಡಿ ಮೇಲ್ವಿಚಾರಣೆ ಮಾಡುವದರಿಂದ ಗ್ರಾಮದಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿಗಳು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಗ್ರಾಮ ಪಂಚಾಯತಿಯಿಂದ ಸೌಲಭ್ಯ ಒದಗಿಸಲು ಸಾರ್ವಜನಿಕರಿಗೆ ಆನ್‌ಲೈನ್ ಸೇವೆಗಳು ದೊರೆಯುತ್ತಿದ್ದು, ಇದರಿಂದ ನಗರ ಪ್ರದೇಶಗಳಿಗೆ ಅಲೆದಾಡುವದು ತಪ್ಪಿಸಿದಂತಾಗುತ್ತದೆ ಎಂದು ಹೇಳಿದರು.
ಭಾರತ ನಿರ್ಮಾಣ ಸೇವಾ ಕೇಂದ್ರ ಕಟ್ಟಡ ಕಾಮಗಾರಿ ಉತ್ತಮ ಗುಣಮಟ್ಟದ್ದಾಗಿರುವ ಕುರಿತು ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಜಿಲ್ಲಾ ಪಂಚಾಯತಿ  ಮಾಜಿ ಸದಸ್ಯರಾದ ರಾಮಣ್ಣ ಚೌಡ್ಕಿ, ಪ್ರಸನ್ನ ಗಡಾದ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮವ್ವ ಈರಪ್ಪ ಕಟ್ಟಿಮನಿ, ಉಪಾಧ್ಯಕ್ಷರಾದ ಮರಿಯಮ್ಮ ಸಣ್ಣ ದ್ಯಾಮಣ್ಣ ಲಮಾಣಿ, ತಾಲ್ಲೂಕ ಯೋಜನಾಧಿಕಾರಿ ರಾಜೇಸಾಬ್ ನದಾಫ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸವರಡ್ಡಿ ತವದಿ, ತಾಲ್ಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ತಾಂತ್ರಿಕ ಸಹಾಯಕ ವಿಜಯ ಬಳಿಗಾರ, ಕಾರ್ಯದರ್ಶಿ ಮಲ್ಲಿಕಾಜಪ್ಪ ಕಮ್ಮಾರ ಸೇರಿದಂತೆ ಗ್ರಾ.ಪಂ ಸದಸ್ಯರು, ಗ್ರಾಮಸ್ಥರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!