ಮತದಾರರ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಕಾಲಾವಕಾಶ
ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2023
—-
ಕೊಪ್ಪಳ ): ರಾಜ್ಯ ಚುನಾವಣಾ ಆಯೋಗದ ನಿರ್ದೇಶನದನ್ವಯ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಜೂನ್ 23ರಂದು ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಕನಕಗಿರಿ, ಗಂಗಾವತಿ, ಕಾರಟಗಿ, ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದೆ.
ಮತದಾರರ ಪಟ್ಟಿಗಳನ್ನು ಎಲ್ಲಾ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯತಿ ಕಚೇರಿಗಳಲ್ಲಿ, ತಾಲೂಕು ಪಂಚಾಯತಿ ಕಚೇರಿಗಳಲ್ಲಿ ಮತ್ತು ತಹಶೀಲ್ದಾರ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಇರಿಸಲಾಗಿದೆ. ಸಾರ್ವಜನಿಕರು ಮತದಾರರ ಪಟ್ಟಿಗಳನ್ನು ಪರಿಶೀಲಿಸಿಕೊಳ್ಳಲು ಕೋರಲಾಗಿದೆ. ಮತದಾರರ ಪಟ್ಟಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 04ರವರೆಗೆ ಕಾಲಾವಕಾಶ ನೀಡಲಾಗಿದೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.