ಅರ್ಥಪೂರ್ಣ ಜಯಂತಿ ಆಚರಣೆಗೆ ಕ್ರಮ ವಹಿಸಿ: ಎಸಿ ಕ್ಯಾ.ಮಹೇಶ್ ಮಾಲಗಿತ್ತಿ
—-
ಕೊಪ್ಪಳ ಜನವರಿ 24 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಫೆಬ್ರವರಿ 26 ರಂದು ಆಚರಿಸಲಾಗುವ ಮಡಿವಾಳ ಮಾಚಿದೇವ ಅವರ ಜಯಂತಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಕಲ್ಪಿಸುವ ಮೂಲಕ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ ಎಂದು ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಹೇಳಿದರು.
ಬುಧವಾರದಂದು ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರ ನಿಗದಿಪಡಿಸಿದಂತೆ ಫೆಬ್ರವರಿ 01 ರಂದು ಜಿಲ್ಲಾ ಕಚೇರಿಗಳಲ್ಲಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ, ತಾಲ್ಲೂಕಾ ಕಚೇರಿ, ಶಾಲಾ, ಕಾಲೇಜು ವಸತಿ ನಿಲಯಗಳಲ್ಲಿ ಜಯಂತಿ ಆಚರಣೆ ಮಾಡಲಾಗುತ್ತದೆ. ಆದರೆ ಸಮಾಜದವರ ಬೇಡಿಕೆ ಅನುಸಾರ ಜಿಲ್ಲಾ ಕೇಂದ್ರದಲ್ಲಿ ಫೆಬ್ರವರಿ 26 ರಂದು ಜಯಂತಿ ಕಾರ್ಯಕ್ರಮವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿತ ಜಯಂತಿ ಆಚರಣೆಗೆ ಸಮಾಜದ ಬಂಧುಗಳು ಅನುಕೂಲ ಮಾಡಿಕೊಡಬೇಕು. ಹಾಗೆಯೇ ಜಯಂತಿ ಆಚರಣೆಗೆ ಸಂಬAಧಿಸಿದ ಇಲಾಖೆಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ಫೆ.26 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಅಕ್ಕಮಹಾದೇವಿ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ, ಗಡಿಯಾರ ಕಂಬ ಮಾರ್ಗವಾಗಿ ಸಾಹಿತ್ಯ ಭವನ ತಲುಪುತ್ತದೆ. ಮೆರವಣಿಗೆ ಸಾಗುವ ಮಾರ್ಗ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ಒದಗಿಸಬೇಕು. ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಅಲಂಕಾರ, ಗಣ್ಯರಿಗೆ ಪುಸ್ತಕ ವಿತರಣೆ, ಪೂಜೆಗೆ ಹೂವು, ಹಾರಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒದಗಿಸಬೇಕು. ಪೊಲೀಸ್ ಇಲಾಖೆಯಿಂದ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಸಾಹಿತ್ಯ ಭವನದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕು. ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ, ಗಣ್ಯರ ಆಹ್ವಾನಕ್ಕೆ ತಹಶೀಲ್ದಾರರು ಕ್ರಮ ವಹಿಸಬೇಕು. ಉಳಿದಂತೆ ಸಂಬAಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಸುಗಮ ಸಂಗೀತಕ್ಕೆ ಕಲಾವಿದರು ಹಾಗೂ ಉಪನ್ಯಾಸ ನೀಡಲು ಉಪನ್ಯಾಸಕರನ್ನು ಸಮಾಜದ ಬೇಡಿಕೆ ಹಾಗೂ ಅವರ ಸಲಹೆಯಂತೆ ಅವರು ಸೂಚಿಸಿದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸುವ ಕಾರಣ ಯಾವುದೇ ರೀತಿಯ ಅನನುಕೂಲವಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಸಮಾಜದ ಜಿಲ್ಲಾಧ್ಯಕ್ಷರಾದ ದುರಗೇಶ ಮಡಿವಾಳ, ತಾಲ್ಲೂಕು ಉಪಾಧ್ಯಕ್ಷರಾದ ರಾಮಣ್ಣ ಕುಟಗನಹಳ್ಳಿ, ಕಾರ್ಯದರ್ಶಿ ಯೋಗೇಶ ಮಡಿವಾಳರ, ಮುಖಂಡರಾದ ಕನಕಪ್ಪ ಮಡಿವಾಳರ, ಗವಿಸಿದ್ದಪ್ಪ ಮಡಿವಾಳರ, ಶಿವಪುತ್ರಪ್ಪ ಮಡಿವಾಳರ, ಚತ್ರಪ್ಪ ಮಡಿವಾಳರ, ಶಂಕ್ರಪ್ಪ ಮಡಿವಾಳರ, ನಿಂಗಜಪ್ಪ ಮಡಿವಾಳರ, ಸಂಗಮೇಶ ಹಳವಾಳ, ವೆಂಕಟೇಶ ಮಡಿವಾಳರ, ಮಹೇಶ ಮಡಿವಾಳರ, ಹುಲಗಪ್ಪ ಮಡಿವಾಳರ, ಕೃಷ್ಣ ಮಡಿವಾಳರ, ಅಜಯ ಮಡಿವಾಳರ ಸೇರಿದಂತೆ ಸಮಾಜದ ಪ್ರಮುಖರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.