ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ: ಮಗಳೊಂದಿಗೆ ಫೋಟೋ ತೆಗೆಸಿಕೊಂಡ ಸಿಇಓ ದಂಪತಿಗಳು

Get real time updates directly on you device, subscribe now.

ಕೊಪ್ಪಳ   ಹೆಣ್ಣು ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ, ಪೋಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜನವರಿ 24ರಂದು ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದ್ದು, ಹೆಣ್ಣು ಮಕ್ಕಳ ದಿನಾಚರಣೆಯನ್ನು ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ವಿಶೇಷವಾಗಿ ಆಚರಣೆ ಮಾಡಲಾಯಿತು.
ಜಾಗೃತಿ ಮೂಡಿಸುವ ಸೆಲ್ಫಿ ಪಾಯಿಂಟ್: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ-2024ರ ನಿಮಿತ್ತ ಸಿದ್ದಪಡಿಸಲಾದ ಬೇಟಿ ಬಚಾವೋ ಬೇಟಿ ಪಡಾವೋ, ಹೆಣ್ಣು ಇಲ್ಲದಿದ್ದರೆ  ಜಗತ್ತೇ ಮಣ್ಣು, ಹೆಣ್ಣನ್ನು ಉಳಿಸಿ ಹೆಣ್ಣನ್ನು ಬೆಳೆಸಿ, ಮಗಳನ್ನು ರಕ್ಷಿಸಿ, ಮಗಳನ್ನು ಓದಿಸಿ, ಎಂಬ ಸಂದೇಶವನ್ನು ಸಾರುವ `ಸೆಲ್ಫಿ ಪಾಯಿಂಟ್’ಗೆ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಚಾಲನೆ ನೀಡಿ, ಫೋಟೋ ತೆಗೆಸಿಕೊಂಡರು.
ಮಗಳೊಂದಿಗೆ ಫೋಟೋ ತೆಗೆಸಿಕೊಂಡ ಸಿಇಓ ದಂಪತಿಗಳು: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ನಿಮಿತ್ತ `ಸೆಲ್ಫಿ ಪಾಯಿಂಟ್’ನಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹಾಗೂ ಅವರ ಪತ್ನಿ ಕಾವ್ಯ ಚತುರ್ವೇದಿ ಅವರು ತಮ್ಮ ಮಗಳೊಂದಿಗೆ ಫೋಟೋ ತೆಗೆಸಿಕೊಂಡರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಇಲಾಖೆ ಜಿಲ್ಲಾ ನಿರೂಪಣಾಧಿಕಾರಿಗಳಾದ ಗಂಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಜಯಶ್ರೀ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಪೋಸ್ಟರ್ ಬಿಡುಗಡೆ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಿದ್ದಪಡಿಸಲಾದ ಹೆಣ್ಣು ಮಕ್ಕಳ ಉಳಿವು, ಅವರ ರಕ್ಷಣೆ ಹಾಗೂ ಶಿಕ್ಷಣ ಕುರಿತಾದ `ನಮ್ಮ ಹೊಣೆಗಾರಿಕೆಗಳು ಮತ್ತು ಜವಾಬ್ದಾರಿಗಳು’ ಎಂಬ ಮಾಹಿತಿಯುಳ್ಳ  ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಇಲಾಖೆ ಜಿಲ್ಲಾ ನಿರೂಪಣಾಧಿಕಾರಿಗಳಾದ ಗಂಗಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಜಯಶ್ರೀ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!