ಸಂವಿಧಾನ ಜಾಗೃತಿ ಜಾಥಾಕ್ಕೆ 26ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ದೇಶದ ಪರಮೋಚ್ಛ ಗ್ರಂಥ ಭಾರತೀಯ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ `ಸಂವಿಧಾನ ಜಾಗೃತಿ ಜಾಥಾ ರಾಷ್ಟ್ರೀಯ ಸಮಾವೇಶ ಆಯೋಜಿಸ ಲಾಗುತ್ತಿದ್ದು, ಜನವರಿ 26ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
`ಸಂವಿಧಾನ ಜಾಗೃತಿ ಜಾಥಾ’ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಜೊತೆ ಈಗಾಗಲೇ ಸಭೆ ನಡೆಸಲಾಗಿದೆ. ಭಾರತದ ಸಂವಿಧಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲಾಗುತ್ತಿದೆ ಎಂದರು.
ಜನವರಿ 26 ರಿಂದ ಫೆಬ್ರವರಿ 23ರ ವರೆಗೆ ಎರಡು ಸ್ತಬ್ದಚಿತ್ರಗಳ ಮೆರವಣಿಗೆಯೂ ಜಿಲ್ಲೆಯ ಎಲ್ಲಾ ಗ್ರಾಪಂ ಮತ್ತು ನಗರ ಪಟ್ಟಣ ಪ್ರದೇಶದಲ್ಲಿ ಸಂಚರಿಸಿ ಬೆಂಗಳೂರಿನತ್ತ ಮುಖ ಮಾಡಲಿವೆ. ಈ ಜಾಥಾ ಮೆರವಣಿಗೆಯುದ್ದಕ್ಕೂ ಸಂವಿಧಾನ ಪೀಠಿಕೆ ಮತ್ತು ಅದರಲ್ಲಿನ ಅಂಶಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಪಂ ಮತ್ತು ನಗರ ಪಟ್ಟಣ ಪ್ರದೇಶದಲ್ಲಿ ಸಂಚರಿಸುವ ಸಂದರ್ಭದಲ್ಲಿ ಅಧಿಕಾರಿಗಳು ಮೆರವಣಿಗೆ ಸುಲಲಿತವಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಈ ಜಾಥಕ್ಕೆ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಎಲ್ಲಾ ಸಾರ್ವಜನಿಕರು ಸಹಕರಿಸಬೇಕು ಎಂದರು.
*ಪ್ರಬಂಧ, ಕ್ವಿಜ್ ಸ್ಪರ್ಧೆ:* ಸಂವಿಧಾನ ಜಾಗೃತಿ ಜಾಥಾ ನಿಮಿತ್ತ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಭಾರತೀಯ ಸಂವಿಧಾನ ಕುರಿತು ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಆಯೋಜಿಸಬೇಕು. ಇದರಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ನೀಡಬೇಕು. ಶಾಲಾ, ಕಾಲೇಜು ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು. ಸ್ಥಳೀಯ ಕಲಾವಿದರಿಂದ ಕಲಾ ಪ್ರದರ್ಶನ ಕಾರ್ಯಕ್ರಮ ಸಹ ಆಯೋಜಿಸಬೇಕು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.