ಗಂಗಾವತಿಯ ವಿವಿಧ ಶಾಲೆಗಳಲ್ಲಿ   ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ

Get real time updates directly on you device, subscribe now.

 ಗಂಗಾವತಿಯ ಎಂಎನ್ಎಂ ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಜೂನಿಯರ್ ಸರ್ಕಾರಿ ಬಾಲಕರ ಪ್ರೌಢಶಾಲೆ, ಮೌಲಾನ ಅಜಾದ್ ಮಾದರಿ ಶಾಲೆ ಸೇರಿದಂತೆ ವಿವಿಧಡೆ ಎಐಡಿಎಸ್ಓ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.
 ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಮಾತನಾಡಿ
“ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊಂದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆಗೆ ತನ್ನ ರಕ್ತ ತರ್ಪಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್.
ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕವಾಗಿದೆ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಯೊಬ್ಬರಿಗೂ ಶಿಕ್ಷಣ, ಉದ್ಯೋಗ, ಹೆಣ್ಣು ಮಕ್ಕಳು ಘನತೆ ಗೌರವದಿಂದ ಬದುಕುವ ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದರು. ಆದರೆ ಅದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ, ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ನೇತಾಜಿಯವರ ವಿಚಾರಗಳನ್ನು ಅರಿತು, ಮೈಗೂಡಿಸಿಕೊಂಡು ಅನ್ಯಾಯ ಹಾಗೂ ಅಸತ್ಯದೊಂದಿಗೆ ಹೋರಾಡುತ್ತಾ ನೇತಾಜಿ ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡಬೇಕಿದೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಉನ್ನತ ಸಂಸ್ಕೃತಿ, ನೀತಿ-ನೈತಿಕತೆಗಳನ್ನು ಮೇಲೆತ್ತುವ ಉದ್ದೇಶದೊಂದಿಗೆ ಜನವರಿ 23ರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ ಜನ್ಮ ವಾರ್ಷಿಕದ ಸಂದರ್ಭದಲ್ಲಿ ಜಿಲ್ಲಾಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಆಯೋಜಿಸಲಾಗಿದ್ದ.. *ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆ* ಸ್ಪರ್ಧೆಗಳಲ್ಲಿ ಗಂಗಾವತಿಯ ವಿವಿಧ ಶಾಲೆಗಳಿಂದ ಭಾಗವಹಿಸಿದ್ದ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಬಹುಮಾನಗಳನ್ನು ಮತ್ತು ಪ್ರಮಾಣ ಪತ್ರಗಳನ್ನು ಆ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.
 ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾಕಾರರಾದ ವೆಂಕಟೇಶ್, ವಿಜಯ್ ಹಾಗೂ ಇನ್ನಿತರ ಕಾರ್ಯಕರ್ತರು ಭಾಗವಹಿಸಿದ್ದರು

Get real time updates directly on you device, subscribe now.

Comments are closed.

error: Content is protected !!