ಬಾಲ್ಯವಿವಾಹದ ಕಠಿಣ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

Get real time updates directly on you device, subscribe now.

): ಬಾಲ್ಯವಿವಾಹದ ಕುರಿತ ಕಠಿಣ ಕಾನೂನು, ಶಿಕ್ಷೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಪ್ -ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಪ್ಪಳರವರ ಸಂಯುಕ್ತಾಶ್ರಯದಲ್ಲಿ ಗುರುವಾರದಂದು ಜಿಲ್ಲಾ ಪಂಚಾಯತ್‌ನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಬಾಲ್ಯವಿವಾಹ ನಿಷೇಧಾಧಿಕಾರಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016, ಅನುಷ್ಠಾನದ ಕ್ರಮಬದ್ಧ ಕಾರ್ಯವಿಧಾನ ಪ್ರಕ್ರಿಯೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗಾಗಿ, ಅಪೌಷ್ಠಿಕ ಮಕ್ಕಳ ಜನನ ನಿಯಂತ್ರಣಕ್ಕಾಗಿ ಹಾಗೂ ತಾಯಿ ಮತ್ತು ಮಕ್ಕಳ ಮರಣ ನಿಯಂತ್ರಣಕ್ಕಾಗಿ ಸರಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ-2006ನ್ನು ಜಾರಿಯಲ್ಲಿ ತಂದಿರುತ್ತದೆ. ಈ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ರಾಜ್ಯವನ್ನು ಬಾಲ್ಯವಿವಾಹ ಮುಕ್ತ ರಾಜ್ಯವನ್ನಾಗಿಸಲು ಕರ್ನಾಟಕ ರಾಜ್ಯ ಸರಕಾರವು ಕರ್ನಾಟಕ ತಿದ್ದುಪಡಿ -2016ನ್ನು ಜಾರಿಯಲ್ಲಿ ತಂದಿದ್ದು, ರಾಷ್ಟçಪತಿಗಳ ಅನುಮೋದನೆಯೊಂದಿಗೆ ದಿನಾಂಕ:03.03.2018ರಿAದ ಜಾರಿಗೆ ಬಂದಿರುತ್ತದೆ. ಕಾಯ್ದೆಯನ್ವಯ ಬಾಲ್ಯವಿವಾಹವನ್ನು ಮಾಡಿದ, ಭಾಗವಹಿಸುವ ಮತ್ತು ಪ್ರೋತ್ಸಾಹಿಸಿದವರಿಗೆ ಹಾಗೂ ಅಪ್ರಾಪ್ತ ವಯಸ್ಸಿನ ಮಗುವನ್ನು ಮದುವೆಯಾದ ಪುರುಷನಿಗೆ ಕನಿಷ್ಠ 01 ವರ್ಷದಿಂದ 02 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷ ರೂಪಾಯಿ ದಂಡವನ್ನು ವಿಧಿಸಲು ಅವಕಾಶವನ್ನು ನೀಡಿದೆ. ದಿನಾಂಕ:03.03.2018ರ ನಂತರದ ಎಲ್ಲಾ ಬಾಲ್ಯವಿವಾಹಗಳು ಅಸಿಂಧು ವಿವಾಹಗಳಾಗಿವೆ. ಅಲ್ಲದೇ ಪೊಲೀಸ್ ಅಧಿಕಾರಿಗಳಿಗೆ ಸೊ-ಮೋಟೋ ಅಧಿಕಾರದಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಳ್ಳುವ ಅಧಿಕಾರವನ್ನು ನೀಡಿದೆ. ಬಾಲ್ಯವಿವಾಹ ಜರುಗಿದ್ದು ಕಂಡುಬAದಲ್ಲಿ ತತಕ್ಷಣವೇ ದೂರು ದಾಖಲಿಸಿ, ಬಾಲ್ಯವಿವಾಹವನ್ನು ಮಾಡಿದ ವ್ಯಕ್ತಿಗಳು, ಸಹಕಾರ ನೀಡಿದವರು, ಆಯೋಜಕರು, ಶಾಮಿಯಾನ ನೀಡಿದವರು, ಅಡುಗೆ ಮಾಡಿದವರು, ಪೂಜಾರಿ, ಮೌಲ್ವಿ ಅಥವಾ ಪಾದ್ರಿಯನ್ನು ಸೇರಿಸಿ ಪ್ರಕರಣವನ್ನು ದಾಖಲಿಸಿ. ನಿಮ್ಮ ವ್ಯಾಪ್ತಿಯಲ್ಲಿ ಕಾಯ್ದೆಯ ಬಗ್ಗೆ ಜಾಗೃತಿಯನ್ನು ಮೂಡಿಸಿ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಮಹಿಳೆ ಮತ್ತು ಮಕ್ಕಳ ರಕ್ಷಣೆಯ ಜವಾಬ್ದಾರಿ ಗ್ರಾಮ ಪಂಚಾಯತಿಗಳದ್ದಾಗಿದೆ. ಜಿಲ್ಲೆಯ ಎಲ್ಲಾ ಪಂಚಾಯತಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಗಳನ್ನು ರಚಿಸಿದ್ದು, ಸಮಿತಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ, ಬಾಲ್ಯವಿವಾಹ ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಕ್ರಮವಹಿಸಿ.  ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ನಿರ್ಮಾಣಕ್ಕಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ “ಮಕ್ಕಳ ಹಕ್ಕುಗಳ ಗ್ರಾಮ ಸಭೆ”ಯನ್ನು ಆಯೋಜಿಸಲಾಗಿದ್ದು, ಈ ಗ್ರಾಮ ಸಭೆಯಲ್ಲಿ ಕಂಡುಬAದ ಮಕ್ಕಳ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಿ, ತಮ್ಮ ಇಲಾಖೆಯಿಂದ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ, ಮಕ್ಕಳ ಸಮಸ್ಯೆಗಳನ್ನು ಪರಿಹರಿಸಿ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ ರಾಮತ್ನಾಳ ಅವರು ಮಾತನಾಡಿ,  ರಾಜ್ಯ ಸರಕಾರವು ಬಾಲ್ಯವಿವಾಹ ಅನುಷ್ಠಾನಕ್ಕೆ ಕ್ರಮಬದ್ಧ ಕಾರ್ಯವಿಧಾನ ಪ್ರಕಿಯೆಗಳನ್ನು ರಚಿಸಿದ್ದು, ಬಾಲ್ಯವಿವಾಹ ಪೂರ್ವದಲ್ಲಿ ಮಾಹಿತಿಯು ಲಭ್ಯವಾದಲ್ಲಿ, ಬಾಲ್ಯವಿವಾಹವಾದ ನಂತರದಲ್ಲಿ ಮಾಹಿತಿಯು ಲಭ್ಯವಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಈ ತರಬೇತಿ ಕಾರ್ಯಕ್ರಮದಲ್ಲಿ ತಿಳಿಸಿ ಕೊಡಲಿದ್ದು, ತಾವುಗಳು ಅರ್ಥಮಾಡಿಕೊಂಡು, ನಿಮ್ಮ ಅಧೀನ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿ, ಅನುಷ್ಠಾನಗೊಳಿಸಲು ಜಿಲ್ಲಾಡಳಿತದೊಂದಿಗೆ ನೀವು ಕೈ ಜೋಡಿಸಿ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ಅವರು ಮಾತನಾಡಿ, ಬಾಲ್ಯವಿವಾಹವನ್ನು ತಡೆಗಟ್ಟಲು ಕಲಂ 13ರಡಿಯಲ್ಲಿ  ತಡೆಯಾಜ್ಞೆಯನ್ನು ನೀಡುವ ಅಧಿಕಾರವನ್ನು ನೀಡಿದೆ. ಜಿಲ್ಲೆಯಲ್ಲಿ ಇದುವರೆಗೂ 03 ಪ್ರಕರಣಗಳಲ್ಲಿ ತಡೆಯಾಜ್ಞೆಯನ್ನು ನೀಡಿದೆ. ಬಾಲ್ಯವಿವಾಹವನ್ನು ತಡೆಗಟ್ಟಲು ಯಾವುದೇ ರೀತಿಯ ಪ್ರಭಾವ ಇದ್ದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ಪಡೆದುಕೊಳ್ಳಬಹುದು ಎಂದು ವಿವರಿಸಿದರು.
ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕರಾದ ಡಾ. ಕೆ. ರಾಘವೇಂದ್ರ ಭಟ್  ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಕುರಿತು, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಹರೀಶ ಜೋಗಿ ಅವರು ಕ್ರಮಬದ್ಧ ಕಾರ್ಯವಿಧಾನಗಳ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು ಭಾಗವಹಿಸಿದ್ದರು. ನಿರೂಪಣಾಧಿಕಾರಿ  ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ, ರವಿಕುಮಾರ ಪವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!