ಜಿಲ್ಲಾ ಕೇಂದ್ರದಲ್ಲಿ ಜ.26 ರಂದು 75ನೇ ಗಣರಾಜ್ಯೋತ್ಸವ ದಿನಾಚರಣೆ

Get real time updates directly on you device, subscribe now.

ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 09 ಗಂಟೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಗಂಗಾವತಿ ಶಾಸಕರಾದ ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ ಅವರು ಆಗಮಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಉಪಸ್ಥಿತರಿರುವರು.
ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣದ ನಂತರ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದವರ ತಂಡದಿAದ ಪಥಸಂಚಲನ, ಸಚಿವರಿಂದ ಗಣರಾಜ್ಯೋತ್ಸವದ ಸಂದೇಶ, ಸಾಧಕರಿಗೆ, ಸ್ವಾತಂತ್ರö್ಯ ಹೋರಾಟಗಾರರಿಗೆ ಸನ್ಮಾನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಂತರ ಸಚಿವರು ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧಚಿತ್ರ ಮೆರವಣಿಗೆಗೆ ಚಾಲನೆ ನೀಡುವರು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!