ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ: ಸಚಿವ ಶಿವರಾಜ ತಂಗಡಗಿ

Get real time updates directly on you device, subscribe now.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸೋಣ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಹೇಳಿದರು.

ಶುಕ್ರವಾರದಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸರ್ಕಾರಿ ಸಾರಿಗೆಯಲ್ಲಿ ಜೂನ್ ಇಂದ ಇಲ್ಲಿಯವರೆಗೆ 2,36,08,000 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 2,64,807 ಕುಟುಂಬಗಳು ನೋಂದಣಿ ಮಾಡಿಕೊಂಡಿದ್ದು, ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಲಕ್ಷಿö್ಮÃ ಯೋಜನೆಯಡಿ ಇಲ್ಲಿಯವರೆಗೆ ಜಿಲ್ಲೆಯ 3,01,246 ಫಲಾನುಭವಿಗಳಿಗೆ ರೂ.285,29,64,000 ಗಳನ್ನು ಜಮೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 2,606 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಪದವೀಧರರಿಗೆ ಪ್ರತಿ ಮಾಹೆ ರೂ.3,000 ಹಾಗೂ ಡಿಪ್ಲೊಮಾ ಹೊಂದಿದವರಿಗೆ ರೂ.1,500 ಗಳ ಮಾಸಿಕ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತಿದೆ. ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ, ಬಿಪಿಎಲ್ ಸೇರಿದಂತೆ ಒಟ್ಟು 3,28,533 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ಒಟ್ಟು 11,83,343 ಸದಸ್ಯರಿಗೆ ಸರ್ಕಾರದ ಎನ್‌ಎಫ್‌ಎಸ್‌ಎ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಹೆಚ್ಚುವರಿಯಾಗಿ ನೀಡಬೇಕಾದ 5ಕೆ.ಜಿ ಅಕ್ಕಿಗೆ ಪ್ರತಿ ಕೆ.ಜಿ ಗೆ 34 ರೂ. ರಂತೆ ಪ್ರತಿ ಸದಸ್ಯರಿಗೆ ರೂ.170 ರಂತೆ ಜುಲೈ ಮಾಹೆಯಿಂದ ಇಲ್ಲಿಯವರೆಗೆ ಒಟ್ಟು 2,89,094 ಪಡಿತರ ಕುಟುಂಬಗಳ ಮುಖ್ಯಸ್ಥರ ಖಾತೆಗೆ ಡಿಬಿಟಿ ಮೂಲಕ 102.58  ಕೋಟಿ ರೂ. ಹಣ ಜಮೆ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲೆಯ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಣೆ ಮಾಡಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ನೀರಾವರಿ ಬೆಳೆಗಳನ್ನು ಹೊರತುಪಡಿಸಿ 2,50,061 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ಇದಕ್ಕೆ ಬೇಕಾಗುವ ರೂ.216.41 ಕೋಟಿ ಬೆಳೆ ಪರಿಹಾರದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ಮಧ್ಯಂತರ ಪರಿಹಾರವಾಗಿ ಒಟ್ಟು 33,375 ಫಲಾನುಭವಿಗಳಿಗೆ ರೂ.26.17 ಕೋಟಿ ಬೆಳೆವಿಮೆ ಮಂಜೂರಾಗಿದೆ. ರಾಜ್ಯ ಸರ್ಕಾರದಿಂದ ಪ್ರತಿ ರೈತರಿಗೆ ರೂ.2,000 ವರೆಗೆ 94,368 ರೈತರಿಗೆ ರೂ.18.84 ಕೋಟಿ ಪರಿಹಾರ ಜಮೆ ಆಗಿದೆ. ಬಾಕಿ ರೈತರಿಗೆ ಪರಿಹಾರ ಜಮೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಬರಗಾಲ ಎದುರಿಸಲು ಎಲ್ಲ ತರಹದ ಪೂರ್ವ ಸಿದ್ದತೆಗಳನ್ನು ಜಿಲ್ಲಾಡಳಿತ ಮೂಲಕ ಮಾಡಿಕೊಳ್ಳಲಾಗಿದೆ ಎಂದು ಬೆಳೆ ಪರಿಹಾರದ ಮಾಹಿತಿ ನೀಡಿದರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಿಂದ ಈ ಭಾಗದ ಸರ್ವತೋಮುಖ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ತುಂಬಾ ಅನುಕೂಲವಾಗಿದೆ. 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ 205.14 ಕೋಟಿ ರೂ. ಹಾಗೂ ಮ್ಯಾಕ್ರೋ ವಲಯದಲ್ಲಿ 89.20 ಕೋಟಿ ರೂ. ಅನುದಾನಕ್ಕೆ ಕ್ರಿಯಾಯೋಜನೆ ಅನುಮೋದಿಸಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಅಮೃತ್ ಯೋಜನೆ 2.0 ಅಡಿಯಲ್ಲಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಪಟ್ಟಣದಲ್ಲಿ ಸಂಯುಕ್ತ ಕುಡಿಯುವ ನೀರಿನ ಸರಬರಾಜು ಯೋಜನೆಯ ಸಲುವಾಗಿ ರೂ.138.47 ಕೋಟಿ ಅನುದಾನಕ್ಕೆ ಅನುಮೋದನೆ ದೊರಕಿದೆ. ತುಂಗಭದ್ರಾ ಜಲಾಶಯ ಮೂಲದಿಂದ ಕಾರಟಗಿ ಮತ್ತು ಕನಕಗಿರಿ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರಿನ ಸರಬರಾಜು ಯೋಜನೆಯ ಸಲುವಾಗಿ ರೂ.204.57 ಕೋಟಿಗೆ ಅನುಮೋದನೆ ದೊರಕಿದೆ. ಇದರಂತೆ ಜಿಲ್ಲೆಯ ರಸ್ತೆ ಅಭಿವೃದ್ಧಿ, ವಿದ್ಯಾರ್ಥಿಗಳ ವಸತಿ ನಿಲಯ, ಕಾಲೇಜುಗಳ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಸಚಿವರು ಹೇಳಿದರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಕ್ರಮದಲ್ಲಿ ಸಂಸದರಾದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರರಾದ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪಥಸಂಚಲನ: ಕಾರ್ಯಕ್ರಮದಲ್ಲಿ ಧ್ವಜಾರೋಹಣದ ನಂತರ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್‌ಸಿಸಿ, ಸೇವಾದಳ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲಾ-ಕಾಲೇಜುಗಳ ಮಕ್ಕಳಿಂದ ಪಥಸಂಚಲನ ಹಾಗೂ ಸಚಿವರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.  ಉತ್ತಮ ಪರೇಡ್ ಪ್ರದರ್ಶಿಸಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಸಾಧಕರಿಗೆ ಸನ್ಮಾನ: ಉತ್ತಮ ಆರೋಗ್ಯ ಸೇವೆ ನೀಡುವ ಮೂಲಕ ಸಾಧನೆ ಮಾಡಿದ ಕೊಪ್ಪಳ ನಗರದ ಕೆ.ಎಸ್ ಹೆಲ್ತಕೇರ್, ಗಂಗಾವತಿಯ ಪಾಟೀಲ್ ನರ್ಸಿಂಗ್ ಹೋಂ, ಕುಷ್ಟಗಿ ತಾಲ್ಲೂಕು ಆಸ್ಪತ್ರೆ, ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಹನುಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಮಾಣ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು.
ಗಣರಾಜ್ಯೋತ್ಸವ ನಿಮಿತ್ತ ಎಸ್.ಎಫ್.ಎಸ್ ಶಾಲೆ ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯ ನೃತ್ಯ ಮಾಡಿ

Get real time updates directly on you device, subscribe now.

Comments are closed.

error: Content is protected !!