ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮನವಿ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಿ ಅವರಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶರಣು ಗಡ್ಡಿ ಮನವಿ ಸಲ್ಲಿಸಿ ಮಾತನಾಡಿ ಆರೋಗ್ಯ ಇಲಾಖೆ ಮತ್ತು ಜನಸಾಮಾನ್ಯರ ಆರೋಗ್ಯದ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಟ್ಟಿಗೆ 15 ಸಾವಿರ ಕನಿಷ್ಠ ವೇತನ ನಿಗದಿ ಮಾಡಬೇಕು.
ಬೇಡಿಕೆ ಈರ-ಈಡೇರಿದಿದ್ದರೆ ಫೆಬ್ರುವರಿ 13ನೇ ತಾರೀಖಿನಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಕರ್ನಾಟಕ ರಾಜ್ಯದ 42,ಸಾವಿರ ಆಶಾ ಕಾರ್ಯಕರ್ತೆಯರು ಹಾಗೂ ಕೊಪ್ಪಳದ ಎಲ್ಲಾ ಆಶಾ ಕಾರ್ಯಕರ್ತೆಯರು ಈ ಹೋರಾಟದಲ್ಲಿ ಭಾಗವಹಿಸುವರು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೊಪ್ಪಳ ನಗರ ಘಟಕ ಅಧ್ಯಕ್ಷ ದ್ರಾಕ್ಷಾಯಿಣಿ ಹಡಗಲಿ, ರಜಿಯಾ ಬೇಗಂ, ಸವಿತಾ, ಗಂಗಮ್ಮ ಪ್ರೇಮ, ಹುಲಿಗಮ್ಮ ಲತಾ ಮುಂತಾದ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು
Comments are closed.