ಹುಬ್ಬಳ್ಳಿಯಲ್ಲಿ ಜ.೩೧ ಪೌರಕಾರ್ಮಿಕರ ರಾಜ್ಯಮಟ್ಟದ ಸಮಾವೇಶ

Get real time updates directly on you device, subscribe now.

ಗಂಗಾವತಿ: ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಮತ್ತು ಸಹಾಯಕರ ಸಂಘದಿಂದ ವಾಣಿಜ್ಯ ನಗರಿ ಹುಬ್ಬಳ್ಳಿಯ ಟೌನ್ ಹಾಲ್‌ನಲ್ಲಿ ಜನೆವರಿ ೩೧ ಬುಧವಾರ ಬೆಳಗ್ಗೆ ೧೦.೩೦ಕ್ಕೆ ಬೃಹತ್ ಪೌರಕಾರ್ಮಿಕರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿಟಿಯು ಜಿಲ್ಲಾ ಅಧ್ಯಕ್ಷ ಹುಲಿಹೈದರ್ ಸಣ್ಣ ಹನುಮಂತಪ್ಪ ತಿಳಿಸಿದರು.
ಅವರು, ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.
ಕೊಪ್ಪಳ ಜಿಲ್ಲೆಯ ೨೦೦೦ ಪೌರ ಕಾರ್ಮಿಕರ ಪೈಕಿ ಪ್ರಮುಖ ಮುವತ್ತು ಪೌರ ಕಾರ್ಮಿಕರು ಮಾತ್ರ ಪಾಲ್ಗೊಳ್ಳುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಮಾವೇಶ ಹಮ್ಮಿಕೊಂಡಿದ್ದೇವೆ, ಮಾತು ಕೊಟ್ಟ ರಾಜ್ಯಸರಕಾರಗಳು ಮರೆಯುತ್ತಿವೆ. ಬಿಬಿಎಂಪಿ ಐದು ಸಾವಿರ ಸೇರಿ ೧೧ ಸಾವಿರ ಪೌರಕಾರ್ಮಿಕರನ್ನು ಮಾತ್ರ ಖಾಯಂಗೊಳಿಸುವುದಾಗಿ ಸರಕಾರ ಪ್ರಕಟಣೆ ಹೊರಡಿಸಿದ್ದು ರಾಜ್ಯದಾದ್ಯಂತ ಇರುವ ಎಲ್ಲಾ ಪೌರ ಕಾರ್ಮಿಕರನ್ನು ಒಂದೇ ಹಂತದಲ್ಲಿ ನೇಮಕ ಮಾಡಿಕೊಳ್ಳಬೇಕು ಮತ್ತು ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ಕಾರ್ಮಿಕರಿಗೆ ನೇರ ಪಾವತಿ ವ್ಯವಸ್ಥೆ ಜಾರಿಯಾಗಬೇಕಿದೆ. ಈ ಸಮಾವೇಶದಲ್ಲಿ ನಾವು ಮಾಡುವ ಮನವಿಗೆ ಸ್ಪಂದಿಸದಿದ್ದಲ್ಲಿ ಬೆಂಗಳೂರು ಫ್ರೀಡಂ ಪಾರ್ಕ್ ಬಳಿ ಉಗ್ರ ಹೋರಾಟ ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಮತ್ತು ಸಹಾಯಕರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷ ಪರಶುರಾಮ್ ಮಾತನಾಡಿ, ಲೋಡರ್‍ಸ್‌ಗಳು, ಕ್ಲೀನರ್, ಡಾಟಾ ಆಪರೇಟರ್, ಸೆಕ್ಯೂರಿಟಿ ಗಾರ್ಡ್ಸ, ಆಫೀಸ್ ಸ್ಟಾಪ್, ಹಾಗು ಎಲ್ಲಾ ಸ್ವಚ್ಛತಾ ಕಾರ್ಮಿಕರು ಸಮಾವೇಶದಲ್ಲಿ ಪಾಲ್ಗೊಳ್ಳಬೇಕಿದ್ದು ನಮ್ಮ ಹಕ್ಕುಗಳ ರಕ್ಷಣೆಗಾಗಿ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್, ಎಐಸಿಸಿಟಿಯು ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಬಾಬರ್ ಹಾಗು ಸದಸ್ಯ ಹನುಮಂತಪ್ಪ ಇದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: