ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ವಹಿಸಿ: ಡಿಸಿ ನಲಿನ್ ಅತುಲ್

Get real time updates directly on you device, subscribe now.

ಜಿಲ್ಲೆಯಲ್ಲಿರುವ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಂಡು ಕುಷ್ಠರೋಗಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ದೇಶದ ಸ್ವಾತಂತ್ರö್ಯ ಸಂಗ್ರಾಮದಲ್ಲಿ ಹುತಾತ್ಮರಾದ ಹಾಗೂ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದAದು ಆಯೋಜಿಸಲಾಗಿದ್ದ ಮೌನಾಚರಣೆ ಕಾರ್ಯಕ್ರಮದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಾರ್ಯಾಲಯದಿಂದ ಆಯೋಜಿಸಲಾಗಿದ್ದ ಕುಷ್ಠರೋಗ ನಿರ್ಮೂಲನಾ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು.
ಜಿಲ್ಲೆಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ನಾವು ಬದ್ಧರಾಗಿರಬೇಕು. ಕುಷ್ಠರೋಗಿಗಳಿಗೆ ನಮ್ಮಿಂದ ಯಾವುದೇ ರೀತಿಯಾದ ತಾರತಮ್ಯ ಆಗದಂತೆ ಎಚ್ಚರ ವಹಿಸಬೇಕು. ಬೇರೆಯವರಿಂದಲೂ ಯಾವುದೇ ರೀತಿಯ ಶೋಷಣೆಗಳಾಗದಂತೆ ನೋಡಿಕೊಳ್ಳಬೇಕು. ನಾವೆಲ್ಲರೂ ಒಟ್ಟಾಗಿ ವೈಯಕ್ತಿಕವಾಗಿ ಹಾಗೂ ನಾಗರಿಕ ವ್ಯಕ್ತಿಭಾವದಿಂದ ಒಗ್ಗಟ್ಟಿನಿಂದ ಸಾಮಾಜಿಕ ಕಳಂಕ-ಪಿಡುಗುಗಳನ್ನು ಹೋಗಲಾಡಿಸಿ ದೌರ್ಜನ್ಯಕ್ಕೊಳಗಾದ ಕುಷ್ಠರೋಗಿಗಳನ್ನು ಮುಖ್ಯವಾಹಿನಿಗೆ ತಂದು ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆಗೊಳಪಡಿಸಿ ಬಾಪೂಜಿಯವರ ನಂಬಿಕೆ ಮತ್ತು ಸದುದ್ದೇಶಗಳನ್ನು ಸಾಕಾರಗೊಳಿಸಲು ಸನ್ನದ್ಧರಾಗಿರಬೇಕು ಎಂದು ತಿಳಿಸಿದ ಅವರು ಕಳಂಕವನ್ನು ಕೊನೆಗೊಳಿಸಿ ಘನತೆಯನ್ನು ಎತ್ತಿ ಹಿಡಿಯಿರಿ ಎಂಬ ಘೋಷವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರ ಎಂ.ಎಚ್., ಡಿಡಿಪಿಐ ಶ್ರೀಶೈಲ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಭಿತ್ತಿಪತ್ರ ಬಿಡುಗಡೆ: ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಕುಷ್ಠರೋಗ ಜಾಗೃತಿ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವೀಂದ್ರ ಎಂ.ಎಚ್., ಸೇರಿದಂತೆ ಇತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!