ನಮ್ಮ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ-CM ಸಿದ್ದರಾಮಯ್ಯ

freedom-of-expression-Karnataka-cm-siddaramayya

Get real time updates directly on you device, subscribe now.

 

ಅನ್ನಭಾಗ್ಯಕ್ಕೆ ಅಕ್ಕಿ ಕೊಡದಂತೆ ತಡೆದವರು ಈಗ ಧರಣಿ ಮಾಡ್ತಾರಂತೆ: ಮುಖ್ಯಮಂತ್ರಿ ವ್ಯಂಗ್ಯ

ಬರಹಗಾರರು, ಪ್ರಕಾಶಕರ ಸಂಘದ. ವಾರ್ಷಿಕೋತ್ಸವ

ಬೆಂಗಳೂರು, ಜೂನ್ 24 : ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ . ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಮುಖ್ಯಮಂತ್ರಿ ಅವರು ಸಾಹಿತಿಗಳಿಗೆ ಅಭಯ ನೀಡಿದರು.

ಅವರು ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20 ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದ ಮುಖ್ಯ ಮಂತ್ರಿಗಳು ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದರು.

ಅಧಿಕಾರದಲ್ಲಿದ್ದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದಿದ್ದವರು ಈಗ ಟೀಕೆ ಗಳನ್ನು ಮಾಡುತ್ತಿದ್ದಾರೆ.

15 ಲಕ್ಷ ರೂ.ಗಳನ್ನು ಪ್ರತಿ ಮನೆಗೆ ಕೊಡುತ್ತೇನೆ ಎಂದವರು 9 ವರ್ಷಗಳಾದರೂ ಈಡೇರಿಸಿಲ್ಲ. ಆದಾಯ ದುಪ್ಪಟ್ಟು ಮಾಡುತ್ತೇವೆ, ನಾ ಖಾವೂಂಗಾ, ನಾ ಖಾನೇದೂಂಗ ಎಂದವರು ಯಾರು? ಅಚ್ಛೇ ದಿನ್ ತಂದುಕೊಟ್ಟಿದ್ದಾರೆಯೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಐದು ಗ್ಯಾರಂಟಿ ಗಳನ್ನು ಈಡೇರಿಸದಿದ್ದರೆ ಅಧಿವೇಶನದಲ್ಲಿ ಧರಣಿ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದು, ಅವರು ನೀಡಿದ್ದ ಪ್ರಣಾಳಿಕೆಯಲ್ಲಿ ಒಂದು ಲಕ್ಷ ದವರಿಗಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದರು. ಹತ್ತು ಗಂಟೆ ವಿದ್ಯುತ್ ನೀಡುತ್ತೇವೆ, ನೀರಾವರಿಗೆ ಒಂದೂವರೆ ಲಕ್ಷ ಕೋಟಿ ಖರ್ಚು ಮಾಡುತ್ತೇವೆ ಎಂದೆಲ್ಲಾ ಹೇಳಿದ್ದರು. ಆದರೆ ಅವುಗಳನ್ನು ಜಾರಿ ಮಾಡದವರು ಈಗ ಧರಣಿ ಕುಳಿತುಕೊಳ್ಳುವುದಾಗಿ ಹೇಳುತ್ತಾರೆ ಎಂದು ವ್ಯಂಗವಾಡಿದರು. ಈ ಮೂಲಕ ಅವರು ಜನಗಳಿಗೆ ತಪ್ಪು ಮಾಹಿತಿ ನೀಡುತ್ತಾರೆ ಎಂದರು.

ಜನರ ಹಣ ವನ್ನು ಖರ್ಚು ಮಾಡುವಾಗ ಎಚ್ಚರಿಕೆ ಅಗತ್ಯ

ಕೇಂದ್ರ ಸರ್ಕಾರ ಲಕ್ಷಾಂತರ ಟನ್ ಅಕ್ಕಿ ಇಟ್ಟುಕೊಂಡು ಕುಳಿತಿದೆ. ಆದರೆ ಅನ್ನಭಾಗ್ಯಕ್ಕೆ ಮಾತ್ರ ಕೊಡುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಈಗ ಧರಣಿ ಮಾಡುತ್ತೇವೆ ಎಂದು ಅರ್ಥವಿಲ್ಲದ ಮಾತಾಡುತ್ತಿದ್ದಾರೆ. ಒಂದು ತಿಂಗಳಿಗೆ 840 ಕೋಟಿ ರೂ. ಅಕ್ಕಿ ಅಗತ್ಯವಿದೆ. ಅಷ್ಟು ಮೊತ್ತ ನೀಡಲು ನಾವು ಸಿದ್ದವಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದೇವೆ ಎಂದರು.

ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಅರ್ಜಿ ಕರೆಯಲಾಗಿದೆ. ತೆರಿಗೆ ಹಣ ಒಬ್ಬರ ಖಾಸಗಿ ಸ್ವತ್ತಲ್ಲ. ಜನರ ಹಣವನ್ನು ಖರ್ಚು ಮಾಡುವಾಗ ಎಚ್ಚರಿಕೆ ಅಗತ್ಯ. 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ 200 ಯೂನಿಟ್ ಗೆ ಕೊಡಬೇಕು ಎನ್ನುತ್ತಾರೆ. ವರ್ಷಕ್ಕೆ ಸಾರಾಸರಿ 70 ಯೂನಿಟ್ ಖರ್ಚು ಮಾಡುವವರಿಗೆ 200 ಯೂನಿಟ್ ಉಚಿತ ಕೊಟ್ಟರೆ ಅದು ದುರುಪಯೋಗ ಮತ್ತು ದುರ್ಬಳಕೆಯಲ್ಲವೇ ಎಂದು ಪ್ರಶ್ನಿಸಿದರು.

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು

ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಳ್ಳಬೇಕು. ಈ ಪ್ರಶ್ನೆಗೆ ನಾವು ಸಮಾಧಾನಕರ ಉತ್ತರ ಕಂಡುಕೊಳ್ಳುವ ಮೂಲಕ ನಮ್ಮ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕು. ಈ ಬಗ್ಗೆ ಎಲ್ಲ ಲೇಖಕರು, ಪ್ರಕಾಶಕರು ಯೋಚಿಸುವ ಮೂಲಕ ಸಮಾಜದಲ್ಲಿನ ಅನೇಕ ನ್ಯೂನ್ಯತೆಗಳ್ನು ಹೋಗಲಾಡಿಸಬಹುದು ಎಂದು ತಿಳಿಸಿದರು.

ಅಸಮಾನತೆ ಹೋಗಲಾಡಿಸಿದರೆ ಸಮಾಜ ಅಭಿವೃದ್ಧಿಯಾಗುತ್ತದೆ :
ಸಮಾಜದಲ್ಲಿ ಬದಲಾವಣೆಗಳಾಗಬೇಕು. ಜಾತಿ ಪದ್ಧತಿಯ ಕಾರಣ, ಬಹಳ ಜನ ಅಕ್ಷರ ಸಂಸ್ಕøತಿಯಿಂದ ವಂಚಿತರಾಗಿದ್ದಾರೆ. ಇದರಿಂದ ಆರ್ಥಿಕ, ಸಾಮಾಜಿಕ ಅಸಮಾನತೆ ಉಂಟಾಗುತ್ತದೆ. ಈ ಅಸಮಾನತೆಯನ್ನು ಹೋಗಲಾಡಿಸಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಿ ಅಭಿವೃದ್ಧಿ ಸಾಧ್ಯವಿದೆ. ನಮ್ಮ ಸಂವಿಧಾನದ ಉದ್ದೇಶವೂ ಇದೆ ಆಗಿದ್ದು, ಇದೇ ಯೋಚನೆಯ ಹಾದಿಯಲ್ಲಿಯೇ ನಮ್ಮ ಅನೇಕ ಬರಹಗಾರರು ಕೆಲಸ ಮಾಡುತ್ತಿದ್ದಾರೆ. ಬರಹಗಾರರು, ಪ್ರಕಾಶಕರು ತಮ್ಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರೆ ಪುಸ್ತಕೋದ್ಯಮ ಬೆಳೆಯಲು ಸಾಧ್ಯ ಎಂದರು.

ಜ್ಞಾನ ವೃದ್ಧಿಗಾಗಿ ಪುಸ್ತಕವನ್ನು ಓದಲೇಬೇಕು :
ಭಾರತದಲ್ಲಿ ಒಂದು ವ್ಯಕ್ತಿ, ಒಂದು ಮತ, ಒಂದು ಮೌಲ್ಯವೆಂದು ಗುರುತಿಸುವಂತೆ ನಮ್ಮ ಸಂವಿಧಾನ ತಿಳಿಸಿದ್ದರೂ, ಸಾಮಾಜಿಕವಾಗಿ ಆರ್ಥಿಕವಾಗಿ ವೈರುಧ್ಯಗಳು ನಮ್ಮ ಸಮಾಜದಲ್ಲಿದೆ. ಅಸಮಾನತೆಗೆ ಒಳಗಾಗುವ ಜನರೇ ಭಾರತದ ಸ್ವಾತಂತ್ರ್ಯದ ಹಾಗೂ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸಗೊಳಿಸುವ ಸಾಧ್ಯತೆಯಿದೆ ಎಂದು ಡಾ. ಅಂಬೇಡ್ಕರ್ ಅವರು ಸಂವಿಧಾನ ಅಂಗೀಕೃತವಾದ ಸಂದರ್ಭದಲ್ಲಿ ಮಾಡಿದ ಐತಿಹಾಸಿಕ ಭಾಷಣದಲ್ಲಿ ತಿಳಿಸಿದ್ದರು. ಜ್ಞಾನ ವೃದ್ಧಿಗಾಗಿ ಪುಸ್ತಕವನ್ನು ಓದಲೇಬೇಕು. ಕಲಿತಷ್ಟು ಜ್ಞಾನ ವಿಕಾಸಗೊಳ್ಳುತ್ತದೆ. ಲೇಖಕರ ಬರಣವಣಿಗೆಗಳು ಸಮಾಜಮುಖಿಯಾಗಿರಬೇಕು ಎಂದು ತಿಳಿಸಿದರು.

ತಾನು ಸಾಹಿತಿಯಲ್ಲದಿದ್ದರೂ, ಸಾಹಿತಿಗಳ ಒಡನಾಟವಿರುವುದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಸಾಹಿತ್ಯವನ್ನು ಬಹಳಷ್ಟು ಓದಿರುವುದಾಗಿ ತಿಳಿಸಿದರು. ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಮಹಾದೇವ ಇಂತಹ ಪ್ರಮುಖ ಸಾಹಿತಿಗಳೊಂದಿಗಿನ ತಮ್ಮ ಸ್ನೇಹವನ್ನು ನೆನೆದರು. ರಾಮದಾಸ ಎಂಬ ಕನ್ನಡ ಗುರುಗಳೊಂದಿಗಿನ ತಮ್ಮ ಸಂಬಂಧವನ್ನು ಸ್ಮರಿಸಿದರು. ಪಾಟೀಲ್ ಪುಟ್ಟಪ್ಪ, ಹಂಪಾ ನಾಗರಾಜ್,ಮಲ್ಲಿಕಾ ಗಂಟಿ ಯಂತಹ ಲೇಖಕರ ಒಡನಾಟದ ಬಗ್ಗೆ ವಿವರಿಸಿದರು.

 

 

There is no need to worry about freedom of expression in our government

Bengaluru, June 24 :

Chief Minister Siddaramaiah said that individual freedom will be ensured and Writers need not worry about freedom of expression in our government and they should not be scared to express their opinion.

He was speaking at the 20th anniversary and award ceremony of the Karnataka State Writers and Publishers Association today.

Promise of giving 15 lakhs to every house is not filled even after 9 years. Promise was also made to double the income which is not fulfilled either and where are Acche Din, Chief Minister questioned.

Former Chief Minister BS Yeddyurappa said that if the five guarantees were not fulfilled, he would stage a protest during the session.On the contrary, they failed to fulfill promises of one lakh waiver of farmer’s loan electricity for ten hours and spending 1.2 lakh crores on irrigation.Those who were unable to keep up their promises now wants to protest , he said.

People’s money should be spent cautiously

The central government owns stock of millions of tons of rice. But they are not ready to provide rice for Annabhagya. Rice worth 840 crores is required per month and our government is ready to pay this amount, he said.

Applications are invited under Griha Lakshmi scheme for women. Tax money is not individual property and one has to be cautious while spending it. They say that 200 units should be given for free under the scheme. CM questioned that providing 200 units free against an average of 70 units per year will be misuse.

Author’s writings should be society oriented. Instead of questioning what society has given me, what is your contribution is to society. We have to find a satisfactory answer to this question to make our life meaningful. If all the authors and publishers focus on these shortcomings, changes can be brought in the society.

Eradication of inequality develops the society

Many people are deprived from education due to caste system and this leads to economic and social inequality. Peace and harmony can be established in the society If this inequality is removed. This is the purpose of our constitution and many of our writers are working on this line of thought.

Reading books enhances knowledge:

Social and economic imparities exists in India. Dr.Ambedkar said that the people who suffer from inequality are likely to destroy the edifice of India’s freedom and democracy. The Chief Minister recalled that though he was not a literary person,he was in company of literary people like Ananthmurthy, Poornachandra Tejaswi, Mahadeva and others.

Get real time updates directly on you device, subscribe now.

Comments are closed.

error: Content is protected !!